ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಟಿ-20 ಪಂದ್ಯ: ಭಾರತಕ್ಕೆ ರೋಚಕ ಸೋಲು
2024-11-11 01:10:54
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ-20 ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡ 3 ವಿಕೆಟ್ಗಳ ಗೆಲುವು ಸಾಧಿಸಿದೆ.
ದ.ಆಫ್ರಿಕಾ ಪರ ಅದ್ಭುತ ಇನ್ನಿಂಗ್ಸ್ ಆಡಿದ ಸ್ಟಬ್ಸ್ ಗೆಲುವಿನ ರೂವಾರಿ ಎನಿಸಿಕೊಂಡರು. ಇದರೊಂದಿಗೆ ಉಭಯ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಟಿ20 ಸರಣಿ 1-1ರಿಂದ ಸಮಬಲಗೊಂಡಿದೆ. 3ನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಭಾರತಕ್ಕೆ ಮೊದಲು ಬ್ಯಾಟಿಂಗ್ ನೀಡಿ, ಫೀಲ್ಡಿಂಗ್ ಆರಿಸಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 124 ರನ್ ಗಳಿಸಿತು.
ಭಾರತ ಪರ ತಿಲಕ್ ವರ್ಮಾ 20, ಅಕ್ಷರ್ ಪಟೇಲ್ 27 ಹಾಗೂ ಕೊನೆಯಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ ಔಟಾಗದೆ 39 ರನ್ ಗಳಿಸಿದರು.
ಪ್ರತ್ಯುತ್ತರವಾಗಿ ಗುರಿ ಬೆನ್ನಟ್ಟಿದ ದ. ಆಫ್ರಿಕಾ ಪರ ಸ್ಟಬ್ಸ್ 41 ಎಸೆತಗಳಲ್ಲಿ 7 ಬೌಂಡರಿಗಳ ನೆರವಿನಿಂದ 47 ರನ್ಗಳ ಅಜೇಯ ಇನ್ನಿಂಗ್ಸ್ ಆಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.
ಭಾರತದ ಪರ ಸ್ಪಿನ್ನರ್ ವರುಣ್ ಚಕ್ರವರ್ತಿ 4 ಓವರ್‌ಗಳಲ್ಲಿ 17 ರನ್ ನೀಡಿ 5 ವಿಕೆಟ್ ಕಬಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಪ್ರಯತ್ನಿಸಿದರಾದರೂ ಸ್ಟಬ್ಸ್ ಅವರ ಇನ್ನಿಂಗ್ಸ್ ಭಾರತಕ್ಕೆ ಗೆಲುವು ದಕ್ಕಲು ಅವಕಾಶ ಮಾಡಿಕೊಡಲಿಲ್ಲ.
ಮಹತ್ವದ 47 ರನ್ ಹೊಡೆದು ಗೆಲುವಿಗೆ ಕಾರಣರಾದ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್ ಟ್ರಿಸ್ಟಾನ್ ಸ್ಟಬ್ಸ್ ಪಂದ್ಯ ಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದರು.
ಒಟ್ಟಾರೆ ಈ ಮಹತ್ವದ ಗೆಲುವಿನಿಂದ ಆತಿಥೇಯ ದಕ್ಷಿಣ ಕನ್ನಡ 4 ಟಿ-20 ಪಂದ್ಯಗಳ ಟಿ-20 ಸರಣಿಯಲ್ಲಿ 1-1 ರಿಂದ ಸಮಬಲ ಸ್ಥಾಪಿಸಿತು.
ಇದರಿಂದ ಮುಂದಿನ 4ನೇ ಹಾಗೂ ಕೊನೆಯ ಟಿ-20 ಪಂದ್ಯವು ಸರಣಿ ವಿಜೇತರನ್ನು ನಿರ್ಧರಿಸಲಿದ್ದು, ಆತಿಥೇಯ ಮತ್ತು ಪ್ರವಾಸಿ ತಂಡಗಳು ಗೆಲುವಿಗಾಗಿ ಹಾತೊರೆದಿವೆ.
comments
Log in to write reviews