ಮೊದಲ ಬಾರಿಗೆ 4 ಜಿ.ಎಸ್.ಟಿ ಅಧಿಕಾರಿಗಳ ಬಂಧನ!

ಮೊದಲ ಬಾರಿಗೆ 4 ಜಿ.ಎಸ್.ಟಿ ಅಧಿಕಾರಿಗಳ ಬಂಧನ!

2024-09-11 09:17:32

ಬೆಂಗಳೂರು, ಸೆ.11: ಕೇಸ್​ವೊಂದನ್ನು ಮುಚ್ಚಿಹಾಕಲು 1.5 ಕೋಟಿ ರೂ. ಹಣ ಪಡೆದಿದ್ದ ಕೇಂದ್ರದ ನಾಲ್ವರು ಜಿಎಸ್​​ಟಿ ಅಧಿಕಾರಿಗಳನ್ನು ಸಿಸಿಬಿ ಪೊಲೀಸರು ಇದೇ ಮೊದಲ ಬಾರಿಗೆ ಬಂಧಿಸಿರುವಂತಹ ಘಟನೆ ನಡೆದಿದೆ.

ಜಿಎಸ್​​ಟಿಯ ಕೇಂದ್ರ ಗುಪ್ತದಳದ ಮಹಿಳಾ ಅಧಿಕಾರಿ​​ ಸೋನಾಲಿ ಸಹಾಯಿ, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ಮನೋಜ್ ಸೈನಿ, ಅಧೀಕ್ಷಕ ಅಭಿಷೇಕ್‌, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ನಾಗೇಶ್ ಬಾಬು ಬಂಧಿತ ಜಿ.ಎಸ್.ಟಿ ಅಧಿಕಾರಿಗಳು.

ಕೇಸ್ ಮುಚ್ಚಿಹಾಕುವುದಾಗಿ ಜಿಎಸ್​​ಟಿ ಅಧಿಕಾರಿಗಳು ಹಣ ಪಡೆದು ಬಳಿಕ ಪರಾರಿಯಾಗಿದ್ದರು. ಈ ಬಗ್ಗೆ ಬೈಯ್ಯಪ್ಪನಹಳ್ಳಿ ಪೊಲೀಸ್​ ಠಾಣೆಗೆ ಓರ್ವ ಉದ್ಯಮಿ ದೂರು ನೀಡಿದ್ದರು. ದೂರು ಆಧರಿಸಿ ಓರ್ವ ಮಹಿಳಾ ಅಧಿಕಾರಿ ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ. ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೆ ದಾಳಿ ರೂಪದಲ್ಲಿ ಕೃತ್ಯವೆಸಗಿದ್ದರು.

ಬೆಂಗಳೂರು ನಗರ ಡಿಸಿಪಿ ದೇವರಾಜ್ ನೇತೃತ್ವದಲ್ಲಿ ಪಶ್ಚಿಮ ವಿಭಾಗ ಪೊಲೀಸರಿಂದ ಕಾರ್ಯಾಚರಣೆ ಮಾಡಿ ಬಂಧಿಸಲಾಗಿದೆ. ಪ್ರಕರಣವನ್ನು ನಗರ ಪೊಲೀಸ್​ ಆಯುಕ್ತರು ಸಿಸಿಬಿಗೆ ವರ್ಗಾವಣೆ ಮಾಡಿದ್ದರು.
 

author single

L Ramprasad

Managing Director

comments

No Reviews