ಇನ್ನೊಂದು ವಾರದಲ್ಲೇ ಚನ್ನಪಟ್ಟಣ ಉಪಚುನಾವಣೆಗೆ ಅಭ್ಯರ್ಥಿ ಘೋಷಣೆ: ಎಚ್.ಡಿ.ಕೆ

ಇನ್ನೊಂದು ವಾರದಲ್ಲೇ ಚನ್ನಪಟ್ಟಣ ಉಪಚುನಾವಣೆಗೆ ಅಭ್ಯರ್ಥಿ ಘೋಷಣೆ: ಎಚ್.ಡಿ.ಕೆ

2024-10-10 10:00:04

ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ಉಪಚುನಾವಣೆಗೆ ಎನ್.ಡಿ.ಎ ಅಭ್ಯರ್ಥಿ ಯಾರೆಂದು ಇನ್ನೊಂದು ವಾರದಲ್ಲೇ ಘೋಷಣೆ ಆಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಇಂದು ಗುರುವಾರ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಬಹುನಿರೀಕ್ಷಿತ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಎನ್.ಡಿ.ಎ ಅಭ್ಯರ್ಥಿ ಯಾರೆಂದು ಇನ್ನೊಂದು ವಾರದಲ್ಲೇ ಘೋಷಣೆ ಆಗಲಿದೆ, ಈಗಾಗಲೇ ಜೆಡಿಎಸ್ ಪಕ್ಷ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ 2 ಬಾರಿ ಗೆದ್ದಿದೆ. ಹಾಗಾಗಿ ಈ ಬಾರಿ ಜೆಡಿಎಸ್ ಭದ್ರಕೋಟೆ ಎನಿಸಿರುವ 
ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ಅನ್ನು ಬಿಜೆಪಿಗೆ ಬಿಟ್ಟಕೊಡಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು. 
ಇದೇ ವೇಳೆ ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಯಾರೆಂಬ ಬಗ್ಗೆ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧರಿಸಿ ಉಪಚುನಾವಣೆ ನಡೆಸುತ್ತೇವೆ ಎಂದು ತಿಳಿಸಿದರು .

author single

L Ramprasad

Managing Director

comments

No Reviews