ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು!

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು!

2024-10-15 04:54:21

ಬೆಂಗಳೂರು, ಅ.15: ಮುಡಾ ಸೈಟ್ ಹಗರಣದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅರ್ಕಾವತಿ ಲೇಔಟ್ ನಿವೇಶನದಾರರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಅರ್ಕಾವತಿ ಲೇಔಟ್​ನಲ್ಲಿ ನಿವೇಶನ ಪಡೆದಿದ್ದ ಶಿವಲಿಂಗಪ್ಪ, ವೆಂಕಟಕೃಷ್ಣಪ್ಪ, ರಾಮಚಂದ್ರಯ್ಯ, ರಾಜಶೇಖರ್ ಎಂಬುವರು ಸಿಎಂ ಸಿದ್ದರಾಮಯ್ಯ, ಬಿಡಿಎ ಆಯುಕ್ತ ಹಾಗೂ ಬಿಡಿಎ ಅಧಿಕಾರಿಗಳು “ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಅರ್ಕಾವತಿ ಲೇಔಟ್​ನಲ್ಲಿ ಹಂಚಿಕೆಯಾಗಿದ್ದ ನಿವೇಶನ ಭೂಗಳ್ಳರ ಪಾಲಾಗುತ್ತಿದೆ. ಅಧಿಕಾರ ದುರ್ಬಳಕೆಯಿಂದ ನಿವೇಶನದಾರರಿಗೆ ತೊಂದರೆಯಾಗುತ್ತಿದೆ” ಎಂದು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

author single

L Ramprasad

Managing Director

comments

No Reviews