ಆದಾಯ ಮೀರಿದ ಆಸ್ತಿ ಗಳಿಕೆ ಕೇಸ್: ಡಿಕೆಶಿ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಿಬಿಐ
2024-10-21 07:52:05
ನವದೆಹಲಿ, ಅ.21: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧದ
ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಹೈಕೋರ್ಟ್ ತೀರ್ಪಿನ ವಿರುದ್ಧ ಸಿಬಿಐ ಸುಪ್ರೀಂಕೋರ್ಟ್ ನಲ್ಲಿ ಇಂದು ಮೇಲ್ಮನವಿ ಸಲ್ಲಿಸಿದೆ.
ಈಗಾಗಲೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೂಡ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯನ್ನು ಕರ್ನಾಟಕ ಸರ್ಕಾರ ವಾಪಸ್ ಪಡೆಯುವ ನಿರ್ಧಾರ ಪ್ರಶ್ನಿಸಿ ಸಿಬಿಐ ಕೂಡ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದೆ.
ಹೀಗಾಗಿ ಡಿ.ಕೆ ಶಿವಕುಮಾರ್ ಅವರಿಗೆ ಮತ್ತೆ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೊಸ ಸಂಕಷ್ಟ ಶುರುವಾಗಿದೆ.
comments
Log in to write reviews