ಕರ್ನಾಟಕ ಸರ್ಕಾರದಿಂದ SBI-PNB ಬ್ಯಾಂಕ್ ಗಳ ವಹಿವಾಟು ಸ್ಥಗಿತ!

ಕರ್ನಾಟಕ ಸರ್ಕಾರದಿಂದ SBI-PNB ಬ್ಯಾಂಕ್ ಗಳ ವಹಿವಾಟು ಸ್ಥಗಿತ!

2024-08-14 09:29:37

ಸರ್ಕಾರದ ಹಣ ದುರ್ಬಳಕೆ ಮಾಡಿಕೊಂಡ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ವಹಿವಾಟಿಗೆ ರಾಜ್ಯಸರ್ಕಾರ ತಡೆ ನೀಡಿದೆ.

ಎಸ್.ಬಿ.ಐ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ಗಳಲ್ಲಿ ಹೊಂದಿರುವ ಎಲ್ಲಾ ಖಾತೆಗಳನ್ನು ರದ್ದುಗೊಳಿಸುವಂತೆ ಎಲ್ಲಾ ಸರ್ಕಾರಿ ಇಲಾಖೆಗಳಿಗೆ ರಾಜ್ಯ ಹಣಕಾಸು ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯಸರ್ಕಾರದ ಒಡೆತನದಲ್ಲಿರುವ ಎಲ್ಲಾ ವಿವಿಧ ಇಲಾಖೆಗಳು, ನಿಗಮ-ಮಂಡಳಿಗಳು, ಕೋಆಪರೇಟಿವ್ ಸೊಸೈಟಿಗಳು, ಸ್ಥಳೀಯ ಸಂಸ್ಥೆಗಳು, ಪಾಲಿಕೆಗಳು, ವಿಶ್ವವಿದ್ಯಾಲಯಗಳು ಸೇರಿದಂತೆ ಸಂಸ್ಥೆಗಳು ಎಸ್. ಬಿ.ಐ ಮತ್ತು ಪಿ.ಎನ್.ಬಿ ಬ್ಯಾಂಕ್ ಗಳ ಖಾತೆಗಳನ್ನು ಶೀಘ್ರವಾಗಿ ರದ್ದುಗೊಳಿಸಬೇಕು ಹಾಗೂ ಯಾವುದೇ ಠೇವಣಿ ಮೊತ್ತವನ್ನು ಇರಿಸಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಾಲ್ಮೀಕಿ ಹಗರಣದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಇಕ್ಕಟ್ಟಿಗೆ ಸಿಲುಕಿಸಲು ಯತ್ನಿಸಿವೆ. ಆದರೆ ಈ ಎರಡೂ ಬ್ಯಾಂಕ್ ಗಳು ಸರ್ಕಾರದ ಬ್ಯಾಂಕ್ ಖಾತೆಗಳನ್ನು ದುರುಪಯೋಗಪಡಿಸಿಕೊಂಡಿರುವುದು ತನಿಖೆ ವೇಳೆ ದೃಢಪಟ್ಟಿರುವ ಹಿನ್ನೆಲೆಯಲ್ಲಿ ತತ್ ಕ್ಷಣದಿಂದಲೇ ಈ ಬ್ಯಾಂಕ್ ಗಳಲ್ಲಿನ ಎಲ್ಲಾ ಖಾತೆಗಳನ್ನು ರದ್ದುಗೊಳಿಸಿ ಹಣಕಾಸಿನ ವ್ಯವಹಾರಕ್ಕೆ ಬ್ರೇಕ್ ಹಾಕಲು ರಾಜ್ಯಸರ್ಕಾರ ನಿರ್ಧರಿಸಿದೆ.
ಆದಾಗ್ಯೂ ಕರ್ನಾಟಕ ಸರ್ಕಾರದ ಈ ನಿರ್ಧಾರದ ಬಗ್ಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಮಾತ್ರ ಮೌನ ತಾಳಿದೆ.

author single

L Ramprasad

Managing Director

comments

No Reviews