ಭದ್ರಾ ಮೇಲ್ದಂಡೆ ಯೋಜನೆಯ ಇನ್ನಷ್ಟು ವರದಿ ಕೇಳಿದ ಕೇಂದ್ರ: ರಾಜ್ಯಸರ್ಕಾರ ಕಿಡಿ

ಭದ್ರಾ ಮೇಲ್ದಂಡೆ ಯೋಜನೆಯ ಇನ್ನಷ್ಟು ವರದಿ ಕೇಳಿದ ಕೇಂದ್ರ: ರಾಜ್ಯಸರ್ಕಾರ ಕಿಡಿ

2024-09-12 10:21:59

ಬೆಂಗಳೂರು, ಸೆ.11: ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಯೋಜನೆಯ ಬಗ್ಗೆ ಮತ್ತಷ್ಟು ವಿವರವನ್ನು ಕೇಂದ್ರ ಸರ್ಕಾರ ಕೇಳಿದೆ. 
ಈ ಹಿನ್ನಲೆ ರಾಜ್ಯಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ‘ಯೋಜನೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ನೀಡಲಾಗಿದೆ. ಸಿಎಂ, ಡಿಸಿಎಂ ಭೇಟಿಯಾಗಿ ಹಣ ಬಿಡುಗಡೆಗೆ ಮನವಿ ಮಾಡಿದ್ದಾರೆ. ಈಗ ಮತ್ತೆ ಕೇಂದ್ರ ಸರ್ಕಾರ ಯೋಜನೆ ಬಗ್ಗೆ ವರದಿ ಕೇಳುತ್ತಿದೆ. ಹಣ ಬಿಡುಗಡೆ ಮಾಡುವ ಮನಸ್ಸಿಲ್ಲದೆ ಕೇಂದ್ರ ಕಾರಣ ಹುಡುಕುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಭದ್ರಾ ಮೇಲ್ಡಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವ ಕುರಿತು ರಾಜ್ಯದಿಂದ ಮತ್ತಷ್ಟು ದಾಖಲೆ ಕೇಳಿದ ಕೇಂದ್ರ ಜಲಶಕ್ತಿ ಸಚಿವಾಲಯ, ರಾಜ್ಯ ಜಲಸಂಪನ್ಮೂಲ ಇಲಾಖೆಗೆ ಪತ್ರ ಬರೆದಿದೆ. ಈ ಹಿಂದೆ 5,300 ಕೋಟಿ ಹಣ ಬಿಡುಗಡೆ ಮಾಡುವುದಾಗಿ ಕೇಂದ್ರ ದೋಣಿ ಡಿತ್ತು. ಆದರೆ, ಇದುವರೆಗೂ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿಲ್ಲ. ಇದೀಗ ಬಿಡುಗಡೆಗೂ ಮುನ್ನವೇ ಮತ್ತೊಮ್ಮೆ ಯೋಜನೆಗಳು ವೆಚ್ಚದ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ.
.
ಇನ್ನು ಈ ಕುರಿತು ನಿನ್ನೆ(ಮಂಗಳವಾರ) ವಿಧಾನಸೌಧದಲ್ಲಿ ಮಾತನಾಡಿದ್ದ ಕಾನೂನು ಸಚಿವ ಹೆಚ್‌.ಕೆ.ಪಾಟೀಲ್‌, ‘ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಈ ಮೊದಲೇ ಘೋಷಿಸಿ ದಂತ 5,300 ಕೋಟಿ ರೂ. ಅನುದಾನವನ್ನು ನೀಡದಿದ್ದರೆ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಜೊತೆಗೆ  ಈ ಯೋಜನೆಗೆ ಹಣ ನೀಡಲು ಹಿಂದೇಟು ಹಾಕಿದರೆ, ಒತ್ತಡ ಹಾಕುವುದು ಅನಿವಾರ್ಯವಾಗುತ್ತದೆ. ಇಲ್ಲದಿದ್ದರೆ, ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದಿದ್ದರು.
 

author single

L Ramprasad

Managing Director

comments

No Reviews