ಚನ್ನಪಟ್ಟಣ ಉಪಚುನಾವಣೆ: ಟಿಕೆಟ್ ತರಲು ಕಡೇ ಕ್ಷಣದವರೆಗೂ ಪ್ರಯತ್ನಿಸುತ್ತೇನೆ‌-ಸಿ.ಪಿ ಯೋಗೇಶ್ವರ್

ಚನ್ನಪಟ್ಟಣ ಉಪಚುನಾವಣೆ: ಟಿಕೆಟ್ ತರಲು ಕಡೇ ಕ್ಷಣದವರೆಗೂ ಪ್ರಯತ್ನಿಸುತ್ತೇನೆ‌-ಸಿ.ಪಿ ಯೋಗೇಶ್ವರ್

2024-10-16 09:00:52

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ಎನ್.ಡಿ‌.ಎ ಅಭ್ಯರ್ಥಿ ಯಾರೆಂಬ ಪ್ರಶ್ನೆಗೆ ಉತ್ತರ ಇನ್ನೂ ಸಿಕ್ಕಿಲ್ಲ.

ಈಗಾಗಲೇ ಚನ್ನಪಟ್ಟಣ ಉಪಚುನಾವಣೆಗಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಮಾಜಿ ಸಚಿವ ಸಿ.ಪಿ‌ ಯೋಗೇಶ್ವರ್ ಹಾಗೂ ಜೆಡಿಎಸ್ ಮಧ್ಯೆ ತೀವ್ರ ಪೈಪೋಟಿ ನಡೆಯುತ್ತಿದೆ.
ಜೆಡಿಎಸ್ ಅಭ್ಯರ್ಥಿಯಾಗಲು ಜೆಡಿಎಸ್ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮುಂದಾಗಿರುವುದು ರಹಸ್ಯವಾಗೇನೂ ಉಳಿದಿಲ್ಲ. ಜೊತೆಗೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರೇ ಬಿಜೆಪಿ ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಟಿಕೆಟ್ ತರಲು ಮುಂದಾಗಿದ್ದಾರೆ‌. ಒಂದು ವೇಳೆ ತಮ್ಮ ಪುತ್ರ ನಿಖಿಲ್ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಒಲವು ತೋರದಿದ್ದರೆ ಆಗ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಜಯಮುತ್ತು ಅವರು ಜೆಡಿಎಸ್ ಅಭ್ಯರ್ಥಿಯಾಗಲು ಮುಂದಾಗಿದ್ದಾರೆ‌. 
ಆದರೆ ಈ ಬಾರಿ ನಾನು ಸ್ಪರ್ಧಿಸಲೇಬೇಕೆಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ‌. ಒಂದು ವೇಳೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎಂದು ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ‌. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಜೊತೆಗೆ ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ತರಲು ಕಡೆಯ ಕ್ಷಣದವರೆಗೂ ಪ್ರಯತ್ನಿಸುತ್ತೇನೆ‌. ಒಂದು ವೇಳೆ ತಮಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬೆಂಬಲಿಗರು ಮತ್ತು ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವೆ ಎಂದು ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ.

ಹೀಗಾಗಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿ ಯಾರಾಗಬಹುದೆಂಬ ಪ್ರಶ್ನೆಗೆ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲ.

author single

L Ramprasad

Managing Director

comments

No Reviews