ಚನ್ನಪಟ್ಟಣ ಉಪಚುನಾವಣೆ: ಎನ್.ಡಿ.ಎ ಟಿಕೆಟ್ ಜೆಡಿಎಸ್ ಪಾಲಿಗೆ!
2024-09-02 03:23:47
ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮಳೆಗಾಲ ಮುಗಿದ ನಂತರ ಬರಲಿದೆ. ಸದ್ಯ ಎಚ್.ಡಿ.ಕುಮಾರಸ್ವಾಮಿ ಅವರು ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕೇಂದ್ರ ಸಚಿವರಾಗಿದ್ದಾರೆ. ಇದರಿಂದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಗೆ ಬಿಜೆಪಿ ಮತ್ತು ಜೆಡಿಎಸ್ ಹಣಾಹಣಿ ನಡೆಸಿದ್ದವು. ಬಿಜೆಪಿ ಟಿಕೆಟ್ ಪಡೆಯಲು ಕೊನೆಯ ಭಾಗದವರೆಗೂ ಮಾಜಿ ಸಚಿವ-ಹಾಲಿ ಎಂಎಲ್ಸಿ ಸಿ.ಪಿ.ಯೋಗೇಶ್ವರ್ ಮುಂದಾಗಲು ಯತ್ನಿಸಿದ ಬೆನ್ನಲ್ಲೇ ಇದೀಗ ಅವರಿಗೆ ಶಾಕಿಂಗ್ ನ್ಯೂಸ್ ಬಂದಿದೆ.
ಚನ್ನಪಟ್ಟಣ ಎನ್.ಡಿ.ಎ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಜೆಡಿಎಸ್-ಬಿಜೆಪಿ ನಡುವೆ ಇದ್ದ ಟಿಕೆಟ್ ಗೊಂದಲಕ್ಕೆ ಬಹುತೇಕ ತೆರೆ ಬಿದ್ದಿದೆ. ಬಿಜೆಪಿಗೆ ಚನ್ನಪಟ್ಟಣ ಕ್ಷೇತ್ರವನ್ನ ಬಿಟ್ಟುಕೊಡದಿರಲು ಜೆಡಿಎಸ್ ನಿರ್ಧಾರ ಮಾಡಿದ್ದು ಚನ್ನಪಟ್ಟಣದಿಂದ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯೋದು ಫಿಕ್ಸ್ ಆಗಿದೆ.
ಚನ್ನಪಟ್ಟಣದಿಂದ ಸಿ.ಪಿ ಯೋಗೇಶ್ವರ್ ಅವರನ್ನು ಸ್ಪರ್ಧೆ ಮಾಡಿಸುವ ಬಗ್ಗೆ ಬಿಜೆಪಿ ನಾಯಕರು ಹೆಚ್.ಡಿ ಕುಮಾರಸ್ವಾಮಿ ಮನವೊಲಿಕೆಗೆ ಮುಂದಾಗಿದ್ದರು. ದೆಹಲಿಯಲ್ಲಿ ಬಿಜೆಪಿ ನಾಯಕರ ಸಭೆಯಲ್ಲಿ ಚನ್ನಪಟ್ಟಣದಿಂದ ಜೆಡಿಎಸ್ ಅಭ್ಯರ್ಥಿ ಸ್ಪರ್ಧೆ ಬಗ್ಗೆ ಹೆಚ್.ಡಿ ಕುಮಾರಸ್ವಾಮಿ ಸುಳಿವು ಕೊಟ್ಟಿದ್ದರು. ಕುಮಾರಸ್ವಾಮಿ ಅವರು ಸಿ.ಪಿ.ಯೋಗೇಶ್ವರ್ ಹೇಳಿಕೆಯಿಂದ ತೀವ್ರ ಸಮಾಧಾನಗೊಂಡಿದ್ದಾರೆ. ಹೀಗಾಗಿ ಸಿ.ಪಿ.ವೈಗೆ ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಮಾಡಲು ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ನಾಯಕರ ಜೊತೆ ಕುಮಾರಸ್ವಾಮಿ ಚರ್ಚೆ ನಡೆಸಿದ್ದಾರೆ.
ಸದ್ಯ ಬಿಜೆಪಿ ಹೈಕಮಾಂಡ್ ನಾಯಕರಿಂದ ಚನ್ನಪಟ್ಟಣ ಜೆಡಿಎಸ್ಗೆ ಬಿಟ್ಟುಕೊಡಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದ್ದರಿಂದ ಜೆಡಿಎಸ್ ನಿಂದ ಅಭ್ಯರ್ಥಿ ಕಣಕ್ಕಿಳಿಸಿ ಮತ್ತೆ ಗೆಲುವಿನ ಬಾವುಟ ಹಾರಿಸಲು ಕುಮಾರಸ್ವಾಮಿ ಸಿದ್ದತೆ ನಡೆಸುತ್ತಿದ್ದಾರೆ.
ಉಪಚುನಾವಣೆಯಲ್ಲಿ ಗಣೇಶ ರಾಜಕಾರಣ...
ಮೈತ್ರಿ ಟಿಕೆಟ್ ಆಕಾಂಕ್ಷಿಗಳಾದ ಬಿಜೆಪಿಯ ಸಿ.ಪಿ.ಯೋಗೇಶ್ವರ್ ಹಾಗೂ ಜೆಡಿಎಸ್‌ನ ಎಚ್.ಸಿ. ಜಯಮುತ್ತು ಅವರು ಗೌರಿ ಗಣೇಶ ಹಬ್ಬಕ್ಕೆ ಸಾವಿರಾರು ಗಣೇಶ ಮೂರ್ತಿ ಹಂಚಲು ಮುಂದಾಗಿದ್ದಾರೆ. ಸಿ.ಪಿ. ಯೋಗೇಶ್ವರ್ ಕ್ಷೇತ್ರದಲ್ಲಿ ಹಿಡಿತ ಇಟ್ಟುಕೊಳ್ಳಲು ಬೇಕಾದ ಎಲ್ಲಾ ಮಾರ್ಗ ಅನುಸರಿಸುತ್ತಿದ್ದಾರೆ. ಗೌರಿ-ಗಣೇಶ ಹಬ್ಬದಂದು ಸಾವಿರ ಗಣೇಶ ಮೂರ್ತಿ ಹಂಚಲು ಮುಂದಾಗಿದ್ದಾರೆ.
ಈ ಕ್ಷೇತ್ರದಲ್ಲಿ 2 ಬಾರಿ ಗೆದ್ದಿರುವ ಎಚ್.ಡಿ.ಕುಮಾರಸ್ವಾಮಿ ಕ್ಷೇತ್ರವನ್ನು ಜೆಡಿಎಸ್ ಬಳಿಯೇ ಉಳಿಸಿಕೊಳ್ಳಲು ನಿರ್ಧರಿಸಿದ್ದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯತ್ತಾರೆ ಎಂಬ ಗಾಳಿ ಸುದ್ದಿ ಹರಿದಾಡುತ್ತಿದೆ. ನಿಖಿಲ್ ಕಣಕ್ಕಿಳಿಯದಿದ್ದರೆ ತಮಗೆ ಅವಕಾಶ ಸಿಗಬಹುದು ಎನ್ನುವ ಲೆಕ್ಕಾಚಾರದಲ್ಲಿ ಜಯಮುತ್ತು ಇದ್ದಾರೆ. ಹೀಗಾಗಿ ಜಯಮುತ್ತು ಅವರು ತಮ್ಮ ತಾಯಿಯ ಹೆಸರಿನಲ್ಲಿ ಸ್ಥಾಪಿಸಿರುವ ಚನ್ನಮ್ಮ ಚಾರಿಟಬಲ್ ಟ್ರಸ್ಟ್ ವತಿಯಿಂದ ಈ ವರ್ಷ 1001 ಗಣೇಶ ಮೂರ್ತಿಗಳನ್ನು ಹಂಚಲು ನೋಂದಣಿ ಆರಂಭಿಸಿದ್ದಾರೆ.
comments
Log in to write reviews