ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ರಾಜಕಾರಣ ಮಾಡಬೇಡಿ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ರಾಜಕಾರಣ ಮಾಡಬೇಡಿ

2024-11-08 08:26:22

ಚಿತ್ರದುರ್ಗ: ರಾಷ್ಟ್ರೀಯ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಯ ಅನುದಾನವನ್ನು ಬಿಡುಗಡೆ ಮಾಡದೆ ರಾಜಕಾರಣ ಮಾಡಬೇಡಿ ಎಂದು ಚಿತ್ರದುರ್ಗ ಜಿಲ್ಲೆಯ ನೀರಾವರಿ  ಅನುಷ್ಠಾನ ಹೋರಾಟ ಸಮಿತಿಯ ಅಧ್ಯಕ್ಷ ಯಾದವ್ ರೆಡ್ಡಿ ಅವರು ಕೇಂದ್ರಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಬಗ್ಗೆ ನಗರದಲ್ಲಿ ಇಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ 3 ವರ್ಷಗಳ ಹಿಂದೆಯೇ ಕೇಂದ್ರ ಬಜೆಟ್ ನಲ್ಲಿ ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ ರಾಜ್ಯಸರ್ಕಾರಕ್ಕೆ ಬಿಡುಗಡೆ ಮಾಡಬೇಕಾದ 5300 ಕೋಟಿ ರೂಪಾಯಿ ಅನುದಾನವನ್ನು ಇನ್ನೂ ಕೇಂದ್ರಸರ್ಕಾರ ಬಿಡುಗಡೆ ಮಾಡಿಲ್ಲ, ಇನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಸಹ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರಸರ್ಕಾರ ಬಿಡುಗಡೆಗೊಳಿಸಬೇಕಿದ್ದ 5300 ಕೋಟಿ ರೂಪಾಯಿ ಅನುದಾನವನ್ನು ಪಡೆದುಕೊಳ್ಳಲು ಪ್ರಾಮಾಣಿಕ ಪ್ರಯತ್ನ ನಡೆಸದೆ, ಕೇವಲ ರಾಜಕೀಯ ಹಗ್ಗಜಗ್ಗಾಟದಲ್ಲಿ ತೊಡಗಿದೆ. ಆದ್ದರಿಂದ ಈಗಲಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭದ್ರಾ ಮೇಲ್ದಂಡೆ ಯೋಜನೆ ಅನುದಾನ ವಿಷಯದಲ್ಲಿ ರಾಜಕೀಯ ಮಾಡದೆ ಆದಷ್ಟು ಶೀಘ್ರವೇ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಮುಂದಾಗಲಿ ಎಂದು ಆಗ್ರಹಿಸಿದರು.

author single

L Ramprasad

Managing Director

comments

No Reviews