ಪ್ರಾಸಿಕ್ಯೂಶನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ನಾಳೆ ಹೈಕೋರ್ಟ್ ಗೆ ಅರ್ಜಿ‌

ಪ್ರಾಸಿಕ್ಯೂಶನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ನಾಳೆ ಹೈಕೋರ್ಟ್ ಗೆ ಅರ್ಜಿ‌

2024-08-18 02:39:26

ಬೆಂಗಳೂರು: ತಮ್ಮ ವಿರುದ್ಧ ಮುಡಾ ಸೈಟ್ ಹಗರಣದ ಬಗ್ಗೆ ಪ್ರಾಸಿಕ್ಯೂಶನ್ ನಡೆಸಲು ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಇಂದು ಬುಧವಾರ ಆಗಸ್ಟ್ 21 ರಂದು ಸಚಿವ ಸಂಪುಟ ಸಭೆಯನ್ನು ಕರೆದಿದ್ದಾರೆ.
ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ತಮ್ಮನ್ನು ರಾಜ್ಯಪಾಲರು ಮುಡಾ ಹಗರಣದ ಬಗ್ಗೆ ಪ್ರಾಸಿಕ್ಯೂಶನ್ ನಡೆಸಲು ಅನುಮತಿ ನೀಡಿರುವ   ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲು ತೀರ್ಮಾನಿಸಿದ್ದಾರೆ. ಇದಕ್ಕಾಗಿ ದೆಹಲಿಯಿಂದ ಕಾಂಗ್ರೆಸ್ ರಾಷ್ಟ್ರೀಯ ನಾಯಕರೂ  ಆದ ಹಿರಿಯ ವಕೀಲರಾದ ಅಭಿಷೇಕ್ ಸಿಂಘ್ವಿ ಮತ್ತು ಕಪಿಲ್ ಸಿಬಾಲ್ ಅವರು ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ.  
ಹೀಗಾಗಿ ಮುಡಾ ಹಗರಣದ ಬಗ್ಗೆ ಪ್ರಾಸಿಕ್ಯೂಶನ್ ನಡೆಸಲು ರಾಜ್ಯಪಾಲರು ನೀಡಿರುವ ಅನುಮತಿ ನೀಡಿರುವ ಕ್ರಮ‌ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ನಾಳೆ ಬೆಂಗಳೂರಿನ ಹೈಕೋರ್ಟ್ ನಲ್ಲಿ ಅರ್ಜಿ‌ ಸಲ್ಲಿಸಿ ತಮ್ಮ ಅಧಿಕಾರ ಉಳಿಸಿಕೊಳ್ಳಲು ಕಾನೂನು ಹೋರಾಟ ನಡೆಸಲಿದ್ದಾರೆ. ಒಂದು ವೇಳೆ ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಂಡರೆ ಆಗ ಸುಪ್ರೀಂಕೋರ್ಟ್ ನಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಶನ್ ತೀರ್ಮಾನ ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಸಲು ಅವಕಾಶ ಇದೆ.

author single

L Ramprasad

Managing Director

comments

No Reviews