ವಯನಾಡು ಗುಡ್ಡಕುಸಿತ: ಮೃತರಾದ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಣೆ

ವಯನಾಡು ಗುಡ್ಡಕುಸಿತ: ಮೃತರಾದ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಣೆ

2024-08-02 16:30:30

ಮಂಡ್ಯ.ಆ.02:- ವಯನಾಡಿನ ಗುಡ್ಡ ಕುಸಿತ ಪ್ರಕರಣದಲ್ಲಿ ಮೃತ ಪಟ್ಟಿದ್ದ ಕೆಆರ್‌ಪೇಟೆಯ ಕತ್ತರಘಟ್ಟ ಮೂಲದ ಅಜ್ಜಿ-ಮೊಮ್ಮಗ ನಿಹಾಲ್ ಹಾಗೂ ಲೀಲಾವತಿ ಅವರ ಮನೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.

ಇದೇ ಕುಟುಂಬದ ಮೂರು ಜನರು ವಯನಾಡಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಹಾಗೂ ಅಗತ್ಯ ಸಹಕಾರ ನೀಡಿ ಸಮನ್ವಯ ವಹಿಸಲು ಕರ್ನಾಟಕ ಸರ್ಕಾರದಿಂದ ಅಧಿಕಾರಿಗಳ ತಂಡ ವಯನಾಡಿಗೆ ತೆರಳಿದ್ದು, ಅವರಿಗೆ ಅಗತ್ಯವಿರುವ ಪ್ರಾಥಮಿಕ ಚಿಕಿತ್ಸೆಯನ್ನು ವಯನಾಡಿನಲ್ಲಿ ಒದಗಿಸಿ ಮುಂದಿನ ದಿನಗಳಲ್ಲಿ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇದ್ದಲ್ಲಿ ಕರ್ನಾಟಕ ಸರ್ಕಾರದಿಂದ ಒದಗಿಸಲಾಗುವುದು.

5 ಲಕ್ಷ ಪರಿಹಾರ ಮೃತರಾದ ಲೀಲಾವತಿ ಅವರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ ವಿತರಣೆಯನ್ನು ಶೀಘ್ರದಲ್ಲೇ ಮಾಡಲಾಗುವುದು. ನಿಹಾಲ್ ಅವರು ಚಿಕ್ಕ ವಯಸ್ಸಿನ ಹುಡುಗನಾಗಿದ್ದು, ಅವರಿಗೂ ಸಹ ಸಣ್ಣ ಪ್ರಮಾಣದ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.

ಸಚಿವರು ಇದೇ ಸಂದರ್ಭದಲ್ಲಿ ಅಂತ್ಯಕ್ರಿಯೆ ಹಾಗೂ ಮುಂತಾದ ಕಾರ್ಯಗಳಿಗೆ ಸಹಾಯವಾಗಲಿ ಎಂದು ವೈಯಕ್ತಿಕವಾಗಿ ಪರಿಹಾರ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಉಪಸ್ಥಿತರಿದ್ದರು.

author single

L Ramprasad

Managing Director

comments

No Reviews