ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಲೋಕಾಯುಕ್ತಕ್ಕೆ ದೂರು!
2024-10-16 10:23:59
ಬೆಂಗಳೂರು, ಅ.16: ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿರುವ ಮುಡಾ ಹಗರಣ ಪ್ರಕರಣ ಸಂಬಂಧ ಮೈಸೂರು ಲೋಕಾಯಕ್ತ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಈಗಾಗಲೇ ಮೊದಲ ಹಂತದಲ್ಲಿ ದಾಖಲೆ ಪರಿಶೀಲನೆ ಮಾಡಿದ್ದಾರೆ. ಈ ಮಧ್ಯೆ ಮುಡಾ ಹಗರಣದ ದೂರುದಾರ, ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಲೋಕಾಯುಕ್ತಕ್ಕೆ ಕಾಂಗ್ರೆಸ್ ದೂರು ನೀಡಿದೆ. ಇಂದು (ಅಕ್ಟೋಬರ್ 26) ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಅವರು ಮೈಸೂರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಇನ್ನು ಲಕ್ಷ್ಮಣ್ ಅವರಿಗೆ ಮೈಸೂರು ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.
ದೂರು ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಲಕ್ಷ್ಮಣ, ಲೋಕಾಯುಕ್ತ ಅಧಿಕಾರಿಗೂ ನನಗೂ ಯಾವುದೇ ಸಂಬಂಧವಿಲ್ಲ. ಆದ್ರೆ, ಲೋಕಾಯುಕ್ತ ಅಧಿಕಾರಿಗಳಿಗೆ ಲಕ್ಷ್ಮಣ ಒತ್ತಡ ಹಾಕುತ್ತಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಪದೇ ಪದೇ ಆರೋಪ ಮಾಡುತ್ತಿದ್ದಾರೆ,. ಸ್ನೇಹಮಯಿ ಕೃಷ್ಣ ವಿರುದ್ಧವೇ ಅನೇಕ ಪ್ರಕರಣಗಳಿವೆ. ಈ ಹಿನ್ನೆಲೆಯಲ್ಲಿ ನಾವು ಅವನ ವಿರುದ್ಧವೇ ಲೋಕಾಯುಕ್ತಕ್ಕೆ ದೂರು ನೀಡಿದ್ದೇವೆ ಎಂದು ಹೇಳಿದರು.
ಇನ್ನು ಮುಡಾ ಹಗರಣ ಪ್ರಕರಣದ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ. ತನಿಖೆ ವೇಳೆ ಸಾಕ್ಷಿ ನಾಶ ಮಾಡಲು ಸಾಧ್ಯವಿಲ್ಲ. ಹಾಗಾಗಿ ನಾವು ಸಾಕ್ಷಿ ನಾಶ ಮಾಡಿದ್ದೇವೆ ಎನ್ನುವುದೆಲ್ಲ ಬರೀ ಸುಳ್ಳು ಎಂದು ಸ್ಪಷ್ಟಪಡಿಸಿರುವ ಸ್ನೇಹಮಯಿ ಕೃಷ್ಣ, ಮುಡಾಗೆ ಸಿಎಂ ಸಿದ್ದರಾಮಯ್ಯ ಒಳ್ಳೆಯ ಅಧಿಕಾರಿಯನ್ನೇ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಿದ್ದಾರೆ. ಈ ಮೂಲಕ ಮುಡಾ ಶುದ್ಧೀಕರಣ ಮಾಡುವ ಕೆಲಸ ಆಗಲಿದೆ ಎಂದು ತಿಳಿಸಿದರು.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮಾಡುತ್ತಿರುವ ಲೋಕಾಯುಕ್ತ ಅಧಿಕಾರಿಗಳ ಮೇಲೆ ಕಾಂಗ್ರೆಸ್ ನಾಯಕ ಲಕ್ಷ್ಮಣ ಅವರು ಒತ್ತಡ ಹಾಕುತ್ತಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು.
comments
Log in to write reviews