150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ-ಮುಖ್ಯಮಂತ್ರಿ ಸಿದ್ದರಾಮಯ್ಯ

150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ-ಮುಖ್ಯಮಂತ್ರಿ ಸಿದ್ದರಾಮಯ್ಯ

2024-10-03 06:29:40

ಮೈಸೂರು,ಅ.03:- ಮೈಸೂರಿನ ಇಮ್ಮಾವು ಗ್ರಾಮದಲ್ಲಿ 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 

ಇಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಆಯೋಜಿಸಲಾಗಿದ್ದ, ದಸರಾ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಬಾರಿ ನಾನು ಮುಖ್ಯಮಂತ್ರಿ ಆಗಿದ್ದಾಗ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ, ಇಮ್ಮಾವು ಗ್ರಾಮದಲ್ಲಿ 110 ಎಕರೆ ವಿಸ್ತೀರ್ಣದ ಭೂಮಿಯನ್ನು ಮೀಸಲಿರಿಸಲಾಗಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತಣೆಗೆ 50 ಎಕರೆ ಜಮೀನನ್ನು ಗುರುತಿಸಿ ನೀಡಲು ತೀರ್ಮಾನಿಸಲಾಗಿದೆ. ಮಾದರಿ ಸಿನಿಮಾ ನಗರಿಯನ್ನು ನಿರ್ಮಿಸುವುದು ಸರ್ಕಾರ ಹಾಗೂ ಚಿತ್ರರಂಗದವರ ಉದ್ದೇಶವಾಗಿದ್ದು, ಇನ್ನು ಮೂರು ವರ್ಷದೊಳಗೆ ಫಿಲಂಸಿಟಿಯನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದರು.

 

ಹೆಚ್ಚು ಕನ್ನಡ ಚಿತ್ರಗಳು ಬರಬೇಕು

 

ಚಿತ್ರರಂಗದ ಬೆಳವಣಿಗೆ ಸರ್ಕಾರ ಎಲ್ಲರೀತಿಯ ಬೆಂಬಲವನ್ನು ನೀಡುತ್ತಾ ಬಂದಿದೆ. ಕನ್ನಡ ಚಲನಚಿತ್ರಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು, ಚಿತ್ರರಂಗ ಬೆಳೆಯಬೇಕು. ಜನರು ಸಿನಿಮಾಗಳನ್ನು ಚಿತ್ರಮಂದಿರಗಳಿಗೆ ಹೋಗಿಯೇ ವೀಕ್ಷಿಸಬೇಕೆಂದು ತಿಳಿಸಿದರು.

 

ಅಕ್ಟೋಬರ್-04 ರಿಂದ 10 ವರೆಗೆ ಸಿನಿಮಾ ಪ್ರದರ್ಶನ

 

ದಸರಾ ಚಲನಚಿತ್ರೋತ್ಸವ ಅಕ್ಟೋಬರ್ 04 ರಿಂದ 10 ವರೆಗೆ ನಡೆಯಲಿದ್ದು, ದೇಶ ವಿದೇಶಗಳ ಪ್ರಶಸ್ತಿ ಪುರಸ್ಕೃತ ಚಲನಚಿತ್ರಗಳು ಪ್ರದರ್ಶನವಾಗಲಿದೆ. ಚಲನಚಿತ್ರೋತ್ಸವದಲ್ಲಿ ಹಳೆಯ ಹಾಗೂ ಹೊಸ ಸಿನಿಮಾಗಳನ್ನು ವೀಕ್ಷಿಸುವ ಸುವರ್ಣ ಅವಕಾಶವಿದ್ದು, ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಳ್ಳಬೇಕಾಗಿ ತಿಳಿಸಿದರು.

 

ಕನ್ನಡ ಚಿತ್ರರಂಗ ಮರೆಯಲಾಗದ ವ್ಯಕ್ತಿ ದ್ವಾರಕೀಶ್

 

ನಟ ನಿರ್ಮಾಪಕ ದಿವಂಗತ ದ್ವಾರಕೀಶ್ ಅವರು ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಈ ಬಾರಿ ದಸರಾ ಚಿತ್ರೋತ್ಸವವನ್ನು ದ್ವಾರಕೀಶ್ ಅವರ ಗೌರವಾರ್ಥವಾಗಿ ಹಮ್ಮಿಕೊಳ್ಳಲಾಗಿದೆ. ದ್ವಾರಕೀಶ್ ಅವರು ಕನ್ನಡ ಚಿತ್ರರಂಗದಲ್ಲಿ ಮರೆಯಲಾಗದ ವ್ಯಕ್ತಿ. ಹೆಲಿಕಾಪ್ಟರ್‌ನಲ್ಲಿ ಮೈಸೂರಿಗೆ ದ್ವಾರಕೀಶ್ ಅವರ ಜೊತೆ ಪ್ರಯಾಣಿಸಿದ ನೆನಪನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಅವರೊಂದಿಗಿದ್ದ ಸ್ನೇಹ ಬಾಂಧವ್ಯದ ಬಗ್ಗೆ ತಿಳಿಸಿದರು. ದ್ವಾರಕೀಶ್ ಅವರ ಮಕ್ಕಳು ಕನ್ನಡ ಚಿತ್ರರಂಗಕ್ಕೆ ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.

 

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಪಶು ಸಂಗೋಪನಾ ಹಾಗೂ ರೇಷ್ಮೆ ಇಲಾಖೆಯ ಸಚಿವರಾದ ಕೆ ವೆಂಕಟೇಶ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಸಚಿವರಾದ ಕೆ.ಹೆಚ್ ಮುನಿಯಪ್ಪ, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರಾದ ಅನಿಲ್ ಕುಮಾರ್ ಸಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ವಿಧಾನ ಪರಿಷತ್ನ ಶಾಸಕರಾದ ಡಾ.ಡಿ.ತಿಮ್ಮಯ್ಯ, ಸಿ ಎನ್ ಮಾಂಜೇಗೌಡ , ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ದ್ರುವ ನಾರಾಯಣ್, ಶಾಸಕರು ವಿಧಾನ ಪರಿಷತ್ನ ಶಾಸಕರಾದ ಕೆ.ವಿವೇಕಾನಂದ, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಆರ್ ಕೃಷ್ಣ ಮೂರ್ತಿ, ಕೆ ಆರ್ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ.ರವಿಶಂಕರ್, ಕಾವೇರಿ ಜಲಾ ನಯನ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮರಿಸ್ವಾಮಿ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಮಾನಸ, ಜಿಲ್ಲಾಧಿಕಾರಿಯದ ಜಿ ಲಕ್ಷ್ಮಿಕಾಂತ್ ರೆಡ್ಡಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ಎಂ ಗಾಯತ್ರಿ ಹಾಗೂ ಖ್ಯಾತ ಚಲನಚಿತ್ರ ನಟಿಯರಾದ ಸಪ್ತಮಿ ಗೌಡಾ, ಶರಣ್ಯ ಶೆಟ್ಟಿ, ಆಕ್ಷಿತ ಬೋಪಯ್ಯ, ಚಲನಚಿತ್ರೋತ್ಸವ ಉಪ ಸಮಿತಿಯ ಉಪ ವಿಶೇಷಾಧಿಕಾರಿ ಬಸವರಾಜು, ಕಾರ್ಯಾಧ್ಯಕ್ಷ ರಂಗೇಗೌಡ ಹಾಗೂ ಕಾರ್ಯದರ್ಶಿ ಹರೀಶ್ ಟಿ.ಕೆ. ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.

author single

L Ramprasad

Managing Director

comments

No Reviews