ದೆಹಲಿ ಸಿಎಂ ಕೇಜ್ರಿವಾಲ್ ಜಾಮೀನು ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

ದೆಹಲಿ ಸಿಎಂ ಕೇಜ್ರಿವಾಲ್ ಜಾಮೀನು ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

2024-09-05 09:56:07

ದೆಹಲಿ, ಸೆ.5: ಇದೀಗ ರದ್ದುಗೊಂಡಿರುವ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು  ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಡೆಸುತ್ತಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠವು ಆಗಸ್ಟ್ 14 ರಂದು ಜಾಮೀನು ಅರ್ಜಿಯನ್ನು ಪರಿಗಣಿಸಿದಾಗ ಮಧ್ಯಂತರ ಜಾಮೀನು ನಿರಾಕರಿಸಿತು. ನಂತರ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಲಾಗಿತ್ತು. ಸಿಬಿಐ ತನ್ನ ಪ್ರತಿವಾದ ಅಫಿಡವಿಟ್ ಸಲ್ಲಿಸಲು ಕಾಲಾವಕಾಶ ನೀಡಿತ್ತು.

ಇಂದು ನಡೆದ ವಿಚಾರಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನಿನ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಸಿಬಿಐ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ಮತ್ತು ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ವಾದವನ್ನು ಆಲಿಸಿದರು.

ವಕೀಲರು ತಮ್ಮ ವಾದವನ್ನು ಅಂತ್ಯಗೊಳಿಸಿದಾಗ “ಸಹಾಯಕ್ಕಾಗಿ ಧನ್ಯವಾದಗಳು. ತೀರ್ಪನ್ನು ಕಾಯ್ದಿರಿಸಲಾಗಿದೆ” ಎಂದು ನ್ಯಾಯಪೀಠವು ಹೇಳಿತು.

ಕೇಜ್ರಿವಾಲ್ ಅವರು ಜಾಮೀನು ನಿರಾಕರಣೆಯನ್ನು ಪ್ರಶ್ನಿಸಿ ಮತ್ತು ಕೇಂದ್ರೀಯ ಸಂಸ್ಥೆ ಸಲ್ಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತನ್ನ ಬಂಧನದ ವಿರುದ್ಧ 2 ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ.  ಜೂನ್ 26 ರಂದು ಸಿಬಿಐ ಎಎಪಿ ಮುಖ್ಯಸ್ಥ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು.

author single

L Ramprasad

Managing Director

comments

No Reviews