ರಾಜ್ಯಪಾಲ ಗೆಹ್ಲೋಟ್ ಅವರ ಆರೋಗ್ಯದಲ್ಲಿ ಏರುಪೇರು!

ರಾಜ್ಯಪಾಲ ಗೆಹ್ಲೋಟ್ ಅವರ ಆರೋಗ್ಯದಲ್ಲಿ ಏರುಪೇರು!

2024-10-25 10:42:47

ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿರುವುದಾಗಿ ತಿಳಿದು ಬಂದಿದೆ.

ವೈರಲ್ ಫೀವರ್ ನಿಂದ ಬಳಲುತ್ತಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ರಾಜ್ಯಪಾಲ ಗೆಹ್ಲೋಟ್ ಅವರ ಆರೋಗ್ಯ ಪರಿಸ್ಥಿತಿ ಸುಧಾರಣೆ ಕಂಡಿದೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. 

ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರವಾಗಿ ವೈರಲ್ ಫೀವರ್‌ನಿಂದ ರಾಜ್ಯಪಾಲರು ಬಳಲುತ್ತಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯಪಾಲರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ವೈದ್ಯರು ಥಾವರ್ ಚಂದ್ ಗೆಹ್ಲೋಟ್ ಅವರನ್ನು ಪರೀಕ್ಷೆಗೆ ಒಳಪಡಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ. ಆದಾಗ್ಯೂ ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

author single

L Ramprasad

Managing Director

comments

No Reviews