ಮುಡಾ ಕೇಸ್ ಪ್ರಾಸಿಕ್ಯೂಶನ್ ವಿರುದ್ಧದ ಸಿಎಂ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್!
2024-09-12 08:11:31
ಬೆಂಗಳೂರು, ಸೆ.12: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆಯನ್ನು ಇಂದು ಹೈಕೋರ್ಟ್ನಲ್ಲಿ ನಡೆಸಲಾಗಿದೆ. ವಾದಮಂಡನೆ ಮುಕ್ತಾಯವಾಗಿದ್ದು, ತೀರ್ಪು ಕಾಯ್ದಿರಿಸಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯಗೆ ಏನು ತೀರ್ಪು ಬರುತ್ತೆ ಎಂದು ಟೆನ್ಷನ್ ಶುರುವಾಗಿದೆ. ಹಾಗಾದ್ರೆ, ಇಂದು ನಡೆದ ವಾದ ಪ್ರತಿವಾದವೇನು? ಕೋರ್ಟ್ ಕಲಾಪದ ಇನ್‌ಸೈಡ್ ಮಾಹಿತಿ ಇಲ್ಲಿದೆ.
ಅಭಿಷೇಕ್ ಮನು ಸಿಂಘ್ವಿ ವಾದ:
ರಾಜ್ಯಪಾಲರು ಅತಿ ವಿರಳ ಸಂದರ್ಭದಲ್ಲಿ ಮಾತ್ರ ವಿವೇಚನಾಧಿಕಾರ ಬಳಸಬೇಕು. ರಾಜ್ಯಪಾಲರು ಜನರಿಂದ ಆಯ್ಕೆಯಾಗಿಲ್ಲ, ನೇಮಕಗೊಂಡಿದ್ದಾರೆ. ಹೀಗಾಗಿ ರಾಜ್ಯಪಾಲರಿಗೆ ಹೆಚ್ಚಿನ ಉತ್ತರದಾಯಿತ್ವ ಇದೆ ಎಂದು ರಾಷ್ಟ್ರಪತಿ ಆಳ್ವಿಕೆಗೆ ಸಂಬಂಧಿಸಿದ ತೀರ್ಪು ಉಲ್ಲೇಖಿಸಿದರು. ಈ ವೇಳೆ ರಾಷ್ಟ್ರಪತಿ ಆಳ್ವಿಕೆ ಹೇರಿದ ಪ್ರಕರಣಗಳು 17 ಎ ಕೇಸ್ಗಿಂತ ಗಂಭೀರವಲ್ಲವೇ? ಆರ್ಟಿಕಲ್ 356 ತೀರ್ಪುಗಳನ್ನು ಸೆ. 17 ಎ ಕೇಸ್ಗೆ ಉಲ್ಲೇಖಿಸುವುದು ಸೂಕ್ತವೇ ಎಂದು ಜಡ್ಜ್ ಪ್ರಶ್ನಿಸಿದ್ದಾರೆ.
ರಾಜ್ಯಪಾಲರು 23 ವರ್ಷದ ಹಳೆಯ ಪ್ರಕರಣದ ತನಿಖೆಗೆ ಅನುಮತಿ ನೀಡಿದ್ದಾರೆ. ರಾಷ್ಟ್ರಪತಿ ಆಳ್ವಿಕೆಗಿಂತ ಇದು ಹೆಚ್ಚು ರಾಜಕೀಯಪ್ರೇರಿತ. ಸೆ.17ಎ ಅಡಿ ಅನುಮತಿ ನೀಡುವಾಗ ಸಚಿವ ಸಂಪುಟದ ಶಿಫಾರಸು ಪಾಲಿಸಬೇಕು. ಪಾಲಿಸದಿದ್ದರೆ ಅದಕ್ಕೆ ಸೂಕ್ತ ಕಾರಣ ನೀಡುವ ಹೊಣೆ ರಾಜ್ಯಪಾಲರ ಮೇಲಿದೆ. ಎಲ್ಲಾ ಪ್ರಕರಣಗಳಲ್ಲೂ ಸಚಿವ ಸಂಪುಟ ಸಿಎಂ ಪರ ತಾರತಮ್ಯ ಮಾಡಿದೆ ಎನ್ನಲಾಗದು. ಸಚಿವ ಸಂಪುಟದ ಸಭೆಯಲ್ಲಿ ಮಂತ್ರಿಗಳು ಬೇರೆ ಬೇರೆ ಅಭಿಪ್ರಾಯ ಮಂಡಿಸಬಹುದು ಎಂದಿದ್ದಾರೆ.
ರಾಜ್ಯಪಾಲರು ಸಚಿವ ಸಂಪುಟದ ಶಿಫಾರಸು ಪಾಲಿಸಲೇಬೇಕೆಂದಿಲ್ಲ. ಆದರೆ ಭಿನ್ನ ನಿಲುವಿಗೆ ಕಾರಣ ನೀಡಬೇಕೆಂಬುದು ನಿಮ್ಮ ವಾದವೇ? ಎಂದು ಜಡ್ಜ್ ಕೇಳಿದ್ದಾರೆ. ಸಚಿವ ಸಂಪುಟದ ಶಿಫಾರಸನ್ನು ಸಾರಾಸಗಟಾಗಿ ತಳ್ಳಿಹಾಕುವಂತಿಲ್ಲ. ರಾಜ್ಯಪಾಲರು ಸಚಿವ ಸಂಪುಟದ ಶಿಫಾರಸ್ಸು ತಪ್ಪೇಕೆಂದು ಹೇಳಿಲ್ಲ. ಹೀಗಾಗಿ ಕಾರಣವೇ ಹೇಳದೆ ಸಚಿವ ಸಂಪುಟದ ಕ್ರಮ ತಾರತಮ್ಯಪೂರಿತವೆನ್ನಲಾಗದು ಎಂದು ಮನು ಸಿಂಘ್ವಿ ವಾದ ಮಂಡಿಸಿದ್ದಾರೆ.
comments
Log in to write reviews