78ನೇ ಸ್ವಾತಂತ್ರ್ಯ ದಿನಾಚರಣೆ: ಸಿಎಂ ಸಿದ್ದರಾಮಯ್ಯ ಭಾಷಣದ ಮುಖ್ಯಾಂಶಗಳು
2024-08-15 09:58:52
ಬೆಂಗಳೂರು: ದೇಶದ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭವನ್ನು ಶಿಷ್ಟಾಚಾರದಂತೆ ಬೆಂಗಳೂರಿನ ಮಾಣಿಕ್ ಶಾ ಪೇರೇಡ್ ಮೈದಾನದಲ್ಲಿ ಆಯೋಜಿಸಲಾಗಿತ್ತು.
ಬೆಳ್ಳಂಬೆಳಗ್ಗೆ ಆರಂಭಗೊಂಡ ಮಾಣಿಕ್ ಶಾ ಪರೇಡ್ ಮೈದಾನದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯವನ್ನುದ್ದೇಶಿಸಿ ಭಾಷಣ ಮಾಡಿದರು.
ತೆರೆದ ಜೀಪಿನಲ್ಲಿ ಸಿಎಂ ಸಿದ್ದರಾಮಯ್ಯ ಪರಿವೀಕ್ಷಣೆ
ಮಾಣಿಕ್ ಷಾ ಪರೇಡ್ ಮೈದಾನಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ತೆರೆದ ಜೀಪಿನಲ್ಲಿ ಪರಿವೀಕ್ಷಣೆ ಮಾಡಿದರು. ಪೋಡಿಯಂ ಮೇಲಿದ್ದ ಬುಲೆಟ್ ಪ್ರೂಫ್ ತೆರವು ಮಾಡಲು ಸಿಎಂ ಸೂಚಿಸಿದರು. ಸಿಎಂ ಸೂಚನೆ ಮೇರೆಗೆ ಬುಲೆಟ್ ಪ್ರೂಫ್ ತೆರವು ಮಾಡಲಾಗಿತ್ತು.
ಮಾಣೆಕ್ ಷಾ ಪೆರೇಡ್ ಮೈದಾನದಲ್ಲಿ ದೇಶದ ಹಸಿರು, ಬಿಳಿ, ಕೇಸರಿ ನಡುವೆ ಅಶೋಕ ಚಕ್ರ ಇರುವ ಭಾರತದ ಹೆಮ್ಮೆಯ ರಾಷ್ಟ್ರಧ್ವಜಾರೋಹಣ ಮಾಡಿ ಮುಖ್ಯಮಂತ್ರಿಗಳು ತಮ್ಮ ಭಾಷಣ ಆರಂಭಿಸಿದರು.
ಮುಖ್ಯಮಂತ್ರಿಗಳ ಭಾಷಣದ ಮುಖ್ಯಾಂಶಗಳು ಹೀಗಿವೆ...
ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರನ್ನು ಮೆರೆಯಲಾಗದು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ,ಬಲಿದಾನಕ್ಕೆ ಬೆಲೆಕಟ್ಟಲಾಗದು ಎಂದು ಸಿಎಂ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.
ಮುಂದಿನ ದಿನಗಳಲ್ಲಿ ಕೇಂದ್ರಸರ್ಕಾರ, ರಾಜ್ಯಗಳು ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಹೀಗಾಗಿ ರಾಜ್ಯಗಳಿಗೆ ಅನುದಾನ ಬಿಡುಗಡೆ ಮಾಡಬೇಕೆಂದು ಈ ಸಂದರ್ಭದಲ್ಲಿ ಸಮಸ್ತ ನಾಡ ಬಂಧುಗಳ ಪರವಾಗಿ ಒತ್ತಾಯಿಸುತ್ತೇನೆ. ಸಂವಿಧಾನದ ಆಶಯಗಳನ್ನು ನಿರ್ಲಕ್ಷಿಸಿ ರಾಜ್ಯಗಳಿಗೆ ದೊರೆಯಬೇಕಾದ ಹಣಕಾಸಿನ ಪಾಲನ್ನು ನೀಡಲು ಮೀನಾಮೇಷ ಎಣಿಸಲಾಗುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ತಮ್ಮ ರಾಜಕೀಯ ಪ್ರಬುದ್ಧತೆ ಮೆರೆದಿದ್ದಾರೆ ಮತದಾರರು. ಪ್ರಜಾಪ್ರಭುತ್ವ ಯಾರ ಕೈಗೊಂಬೆಯಾಗಲು ಸಾಧ್ಯವಿಲ್ಲ ಎಂಬ ಸಂದೇಶ ನೀಡಿದ್ದಾರೆ. ಜನತೆಯ ತೀರ್ಪನ್ನು ಧಿಕ್ಕರಿಸಿ ನಡೆಸುವ ಹಿಂಬಾಗಲ ರಾಜಕಾರಣವನ್ನು ಇತಿಹಾಸದಲ್ಲಿ ಜನತೆ ಎಂದಿಗೂ ಕ್ಷಮಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದರು.
ಕೇಂದ್ರಸರ್ಕಾರದ ಅನುದಾನ ಹಂಚಿಕೆ ವಿಚಾರ ಪ್ರಸ್ತಾಪ
ಕೇಂದ್ರ-ರಾಜ್ಯ ಸಂಬಂಧದ ಸವಾಲುಗಳು ಎಂಬ ವಿಚಾರದ ಬಗ್ಗೆ ಕೇಂದ್ರಸರ್ಕಾರದ ತಾರತಮ್ಯ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶದ ಭಾಷಣ ಮಾಡಿದರು. "ಜನಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ರಾಜ್ಯದ ಜವಾಬ್ದಾರಿಯಾದರೆ. ಇವುಗಳಿಗೆ ಪೂರಕ ಸಂಪನ್ಮೂಲ ಒದಗಿಸುವುದು ಕೇಂದ್ರದ ಹೊಣೆಗಾರಿಕೆ. ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಸರ್ಕಾರ ಈ ಆಶಯದಿಂದ ದೂರ ಸರಿಯುತ್ತಿದೆ. ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗುತ್ತಿದೆ. ಸಂವಿಧಾನದ ಆಶಯಗಳನ್ನು ನಿರ್ಲಕ್ಷಿಸಿ ರಾಜ್ಯಗಳಿಗೆ ದೊರೆಯಬೇಕಾದ ಹಣಕಾಸಿನ ಪಾಲನ್ನು ನೀಡಲು ಮೀನಾಮೇಷ ಎಣಿಸುತ್ತಿದೆ. ಕೇಂದ್ರದಿಂದ ಪರಿಹಾರ ಮೊತ್ತ ಪಡೆಯಲು ನ್ಯಾಯಾಲಯದ ಮೊರೆ ಹೋಗುವ ಅನಿವಾರ್ಯತೆ ಎದುರಾಗಿದೆ. ಇದು ಜನಹಿತಕ್ಕೆ ಒಳ್ಳೆಯದಲ್ಲ ಎಂದರು.
ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ...
ಗ್ಯಾರಂಟಿಯಿಂದ ಪ್ರತಿಯೊಬ್ಬ ಫಲಾನುಭವಿಗೆ ಅನುಕೂಲ ಆಗಿದೆ. ಸುಮಾರು 4 ರಿಂದ 5 ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಅನೇಕ ಬಡಕುಟುಂಬಗಳಿಗೆ ಅನುಕೂಲವಾಗಿದೆ. ಈ ಯೋಜನೆಗಳು ರಾಜ್ಯದಲ್ಲಿ ಮುಂದುವರೆಯುತ್ತಿದೆ. ಇದರಿಂದ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ಉತ್ತರ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಆರ್ಥಿಕ ಬೆಳವಣಿಗೆಯನ್ನ ಸಾಧಿಸಿ ಉತ್ತರ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಜಾಯಿಷಿ ಹೇಳಿದರು.
comments
Log in to write reviews