ಚುನಾವಣಾ ಬಾಂಡ್ ಸುಲಿಗೆ ಅಕ್ರಮ: ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ!

ಚುನಾವಣಾ ಬಾಂಡ್ ಸುಲಿಗೆ ಅಕ್ರಮ: ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ!

2024-09-30 10:27:17

ಬೆಂಗಳೂರು, ಸೆ.30: ಚುನಾವಣಾ ಬಾಂಡ್ ಸುಲಿಗೆ ಅಕ್ರಮ ಪ್ರಕರಣದ ಎಫ್ಐಆರ್ ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. 

ಈ ಮೂಲಕ ಕೇಂದ್ರ ವಿತ್ತ  ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ಮುಖಂಡರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.

ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಮಾಜಿ ಸಂಸದ ನಳೀನ್ ಕುಮಾರ್ ಅವರು ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಹೈಕೋರ್ಟ್ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿದೆ.

ಬೆಂಗಳೂರಿನಲ್ಲಿರುವ ಕಂಪನಿಗಳಿಗೆ ಬೆದರಿಕೆ ಹಾಕಿ ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಲಾಗಿದೆ ಎಂದು ಜನಾದೇಶ ಪರಿಷತ್ ನೀಡಿದ ದೂರಿನ ಆಧಾರದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದ ಸೂಚನೆಗೆ ಮೇರೆಗೆ ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು

ಪ್ರಕರಣದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಇಡಿ ಅಧಿಕಾರಿಗಳು, ಮಾಜಿ ಸಂಸದ-ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ 6 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.

author single

L Ramprasad

Managing Director

comments

No Reviews