ಲೋಕಸಭೆ ಬಿಜೆಪಿ ಸಚೇತಕರಾಗಿ 16 ಮಂದಿ ಆಯ್ಕೆ ; ಲಕ್ ಹೊಡೆದ ಕೋಟ ಶ್ರೀನಿವಾಸ ಪೂಜಾರಿ, ತಳಮಟ್ಟದ ರಾಜಕಾರಣಿಗೆ ರಾಷ್ಟ್ರ ರಾಜಕಾರಣದಲ್ಲೂ ಸ್ಥಾನ !

ಲೋಕಸಭೆ ಬಿಜೆಪಿ ಸಚೇತಕರಾಗಿ 16 ಮಂದಿ ಆಯ್ಕೆ ; ಲಕ್ ಹೊಡೆದ ಕೋಟ ಶ್ರೀನಿವಾಸ ಪೂಜಾರಿ, ತಳಮಟ್ಟದ ರಾಜಕಾರಣಿಗೆ ರಾಷ್ಟ್ರ ರಾಜಕಾರಣದಲ್ಲೂ ಸ್ಥಾನ !

2024-07-29 11:29:12

ಬೆಂಗಳೂರು, ಜುಲೈ 29: ಲೋಕಸಭೆಯಲ್ಲಿ ಒಬ್ಬರನ್ನು ಮುಖ್ಯ ಸಚೇತಕ ಹಾಗೂ 16 ಮಂದಿಯನ್ನು ಸಚೇತಕರನ್ನಾಗಿ ನೇಮಕ ಮಾಡಿ ಬಿಜೆಪಿ ಸಂಸದೀಯ ಮಂಡಳಿ ಕಾರ್ಯದರ್ಶಿ ಶಿವಶಕ್ತಿನಾಥ್ ಭಕ್ಷಿ ಅವರು ಸೋಮವಾರ (ಜುಲೈ 29) ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಚೇತಕ ಹುದ್ದೆ ಪಡೆದಿದ್ದಾರೆ. 

ಡಾ.ಸಂಜಯ್ ಜೈಸ್ವಾಲ್ ಅವರನ್ನು ಲೋಕಸಭೆಯ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಿದ್ದರೆ, ಇನ್ನುಳಿದ 16 ಜನರನ್ನು ಸಚೇತಕರನ್ನಾಗಿ ನೇಮಿಸಲಾಗಿದೆ. 16 ಜನರ ಸಚೇತಕರ ಪೈಕಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಸ್ಥಾನ ಸಿಕ್ಕಿದೆ. ಈಮೂಲಕ ತಳಹಂತದಿಂದ ಮೇಲಕ್ಕೆ ಬಂದಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ರಾಷ್ಟ್ರ ರಾಜಕಾರಣದಲ್ಲಿಯೂ ಮತ್ತೊಂದು ಹಂತಕ್ಕೆ ಹೋಗಿದ್ದಾರೆ. 

ತಮ್ಮನ್ನು ಸಚೇತಕರನ್ನಾಗಿ ನೇಮಕ ಮಾಡಿದ ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಗೆ ಕೋಟಾ ಶ್ರೀನಿವಾಸ ಪೂಜಾರಿ ಧನ್ಯವಾದ ತಿಳಿಸಿದ್ದಾರೆ. ಪಕ್ಷದ ಸಂಸದೀಯ ಮಂಡಳಿಯು ನನ್ನನ್ನು ಲೋಕಸಭಾ ಸಚೇತಕ ಹುದ್ದೆಗೆ ಪರಿಗಣಿಸಿ ಆಯ್ಕೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾರವರಿಗೆ ಹಾಗೂ ಪಕ್ಷದ ಮುಖಂಡರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. 

ಹಿಂದೆ ವಿಧಾನ ಪರಿಷತ್​ ಸದಸ್ಯರಾಗಿ ವಿಪಕ್ಷ ನಾಯಕರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಬಿಜೆಪಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್​ ನೀಡಿತ್ತು. ಅದರಂತೆ ಈ ಕ್ಷೇತ್ರದಲ್ಲಿ ಗೆದ್ದ ಕೋಟ ಶ್ರೀನಿವಾಸ್ ಪೂಜಾರಿ ಸಂಸತ್ ಪ್ರವೇಶಿಸಿದ್ದಾರೆ. ಇದೀಗ ಇವರನ್ನು ಲೋಕಸಭೆಯಲ್ಲಿ ಸಚಿವ ಸ್ಥಾನ ಸಿಗದಿದ್ದರೂ ಪಕ್ಷದ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ.
 

author single

L Ramprasad

Managing Director

comments

No Reviews