ಅಕ್ರಮ ಆಸ್ತಿ ಗಳಿಕೆ ಕೇಸ್: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಲೋಕಾ ನೋಟಿಸ್
2024-08-22 02:54:00
ಬೆಂಗಳೂರು, ಆ.22: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ಬಗ್ಗೆ ಲೋಕಾಯುಕ್ತ ತನಿಖಾ ತಂಡ ಇಂದು ವಿಚಾರಣೆಗೆ ಹಾಜರಾಗುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ನೀಡಿದೆ.
ಈಗಾಗಲೇ ಡಿ.ಕೆ.ಶಿವನ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪದ ತನಿಖೆ ನಡೆಸುತ್ತಿದ್ದ ಸಿಬಿಐ ಇದೀಗ ಪ್ರಕರಣದ ತನಿಖೆಯನ್ನು ಕೋರ್ಟ್ ಆದೇಶದಂತೆ ರಾಜ್ಯದ ಲೋಕಾಯುಕ್ತ ಸಂಸ್ಥೆಗೆ ವರ್ಗಾಯಿಸಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಲೋಕಾಯುಕ್ತ ತನಿಖಾ ತಂಡ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯ ವಿಚಾರಣೆಗೆ ಹಾಜರಾಗುವಂತೆ ಡಿಸಿಎಂ ಡಿ. ಕೆ.ಶಿವಕುಮಾರ್ ಅವರಿಗೆ ನೋಟಿಸ್ ನೀಡಿದೆ.
ಆದರೆ ಮುಡಾ ಸೈಟ್ ಹಗರಣ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಾಸಿಕ್ಯೂಶನ್ ಗೆ ಒಳಪಡಿಸಲು ಅನುಮತಿ ನೀಡಿದ್ದ ಕ್ರಮವನ್ನು ಖಂಡಿಸಿ ರಾಜ್ಯಸರ್ಕಾರದ ಸಚಿವ ಸಂಪುಟ ಸಭೆ ಬೆಳಗ್ಗೆ ನಡೆಯುತ್ತಿದೆ. ಈ ಸಂಪುಟ ಸಭೆ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಧ್ಯಾಹ್ನ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಗೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಲಿದ್ದಾರೆ ಎಂದು ತಿಳಿದುಬಂದಿದೆ.
comments
Log in to write reviews