ಮುಡಾ ಕೇಸ್: ಇ.ಡಿಯಿಂದ ECIR ದಾಖಲು! ಸಿದ್ದರಾಮಯ್ಯಗೆ ಸಂಕಷ್ಟ!!!
2024-09-30 08:49:23
ಬೆಂಗಳೂರು, ಸೆ.30: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ಹಗರಣ ಮಾಡಿದ್ದಾರೆಂಬ ಆರೋಪದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಮೇಲೆ ಮೈಸೂರು ಲೋಕಾಯುಕ್ತ ಪೊಲೀಸರಿಂದ ಎಫ್‌ಐಆರ್ ದಾಖಲಿಸಲಾಗಿದೆ. ಇದರ ಬೆನ್ನಲ್ಲಿಯೇ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯಕ್ಕೂ (ಇಡಿ) ದೂರು ನೀಡಿದ್ದರು. ಮೈಸೂರು ಲೋಕಾಯುಕ್ತದಲ್ಲಿ ದಾಖಲಾದ ಎಫ್‌ಐಆರ್ ಆಧರಿಸಿ ಇದೀಗ ಕೇಂದ್ರಸರ್ಕಾರದ ತನಿಖಾ ಸಂಸ್ಥೆ ಇಡಿ ಸಂಸ್ಥೆಯಿಂದಲೂ ಜಾರಿ ಪ್ರಕರಣದ ಮಾಹಿತಿ ವರದಿ (ಇಸಿಐಆರ್) ದಾಖಲಿಸಿಕೊಂಡಿದೆ.
ಲೋಕಾಯುಕ್ತ ಎಫ್‌ಐಆರ್‌ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ ಇಸಿಐಆರ್ ದಾಖಲಿಸಿದೆ. ಕೇಂದ್ರಸರ್ಕಾರದ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯದ (ಇಡಿ) ಕೇಸಿನಲ್ಲಿಯೂ ಸಿಎಂ ಸಿದ್ದರಾಮಯ್ಯ ಅವರು ಆರೋಪಿ ಎ1 ಆರೋಪಿಯಾಗಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಭಾಮೈದ ಮಲ್ಲಿಕಾರ್ಜುನಸ್ವಾಮಿ ಹಾಗೂ ಜಮೀನು ಮಾರಾಟ ಮಾಡಿದ್ದ ದೇವರಾಜು ಅವರ ವಿರುದ್ಧವೂ ಇಸಿಐಆರ್‌ನಲ್ಲಿ ಆರೋಪಿಗಳೆಂದು ಉಲ್ಲೇಖ ಮಾಡಲಾಗಿದೆ. ಇನ್ನು ಜಾರಿ ನಿರ್ದೇಶನಾಲಯದ ಕೇಸಿನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಕುರಿತಂತೆ ಪ್ರಕರಣ ದಾಖಲಾಗಿದೆ.
ಸಿಎಂ ವಿರುದ್ಧ ದಾಖಲಾದ ECIR ಅಂದ್ರೇನು?
PMLA ಕಾಯ್ದೆಯಡಿ ECIR ದಾಖಲಾಗಿದ್ದು, ಈ ECIR ಪೊಲೀಸರ FIRಗೆ ಸರಿ ಸಮಾನವಾಗಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ವಿಶೇಷಾಧಿಕಾರವಿದೆ. ಸಮನ್ಸ್ ನೀಡಿ ವಿಚಾರಣೆಗೆ ಕರೆಯಬಲ್ಲ ಅಧಿಕಾರ ಇ.ಡಿ ಗಿದೆ. ಅಲ್ಲದೇ ತನಿಖೆ ಹಂತದಲ್ಲಿ ಆಸ್ತಿಗಳನ್ನ ಸೀಜ್ ಮಾಡುವ ಅಧಿಕಾರ ಇಡಿ ಹೊಂದಿದೆ.
ಇಡಿ ಮುಂದಿನ ಪ್ರಕ್ರಿಯೆ ಏನು?
ನಾಲ್ವರನ್ನು ಆರೋಪಿಗಳನ್ನಾಗಿಸಿ ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲು ಮಾಡಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ವಿಶೇಷಾಧಿಕಾರವಿದೆ. ಹೀಗಾಗಿ ಇಡಿ ಮುಂದಿನ ಪ್ರಕ್ರಿಯೆ ಏನು ಎನ್ನುವುದನ್ನು ನೋಡುವುದಾದರೆ, ಪ್ರಕರಣ ದಾಖಲು ಆಗುತ್ತಿದ್ದಂತೆ ದಾಖಲೆಗಳನ್ನ ಕಳೆಹಾಕಲಿದ್ದು, ಪ್ರಕರಣದ ದಾಖಲೆಗಳನ್ನೆ ಇಡಿ ವಶಕ್ಕೆ ಪಡೆಯಲಿದೆ. ಅಲ್ಲದೇ ಮುಡಾ ಕಚೇರಿ ಮೇಲೆ ದಾಳಿ ಮಾಡಲಿದ್ದು, ಸಂಬಂಧಪಟ್ಟ ಇಲಾಖೆಗಳ ಮೇಲೆ ದಾಳಿ ಮಾಡಬಹುದು.
ಇನ್ನು ಯಾವ ಹಂತಗಳಲ್ಲಿ ಏನೇನು ಆಗಿದೆ? ಎಂದು ನೋಡುವುದಾದರೆ ಹಂತಗಳಲ್ಲಿ ಇದ್ದ ಅಧಿಕಾರಿಗಳು ಜನ ಪ್ರತಿನಿಧಿ ಯಾರು? ಎಂಬ ಮಾಹಿತಿ ಕಲೆಹಾಕಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ವಿಚಾರಣೆ ನಡೆಸಲಿದೆ. ಅಲ್ಲದೇ ಪ್ರಕರಣದ ನಾಲ್ವರು ಆರೋಪಿಗಳಿಗೆ ಸಮನ್ಸ್ ನೀಡಿ ವಿಚಾರಣೆಗೊಳಪಡಿಸಬಹುದು. ಜೊತೆಗೆ ಆರೋಪಿಗಳ ಮನೆಯ ಮೇಲೆ ದಾಳಿ ಮಾಡಲಿದೆ. ಕೊನೆಗೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳ ಬಂಧನವಾದರೂ ಅಚ್ಚರಿಪಡಬೇಕಿಲ್ಲ.
comments
Log in to write reviews