ಮುಡಾ ಕೇಸ್: ಹೈಕೋರ್ಟ್ ತೀರ್ಪು ಖಂಡಿಸಿದ್ದ ಸಚಿವ ಜಮೀರ್ ಅಹ್ಮದ್ ಗೆ ಕಾನೂನು ಸಂಕಷ್ಟ!

ಮುಡಾ ಕೇಸ್: ಹೈಕೋರ್ಟ್ ತೀರ್ಪು ಖಂಡಿಸಿದ್ದ ಸಚಿವ ಜಮೀರ್ ಅಹ್ಮದ್ ಗೆ ಕಾನೂನು ಸಂಕಷ್ಟ!

2024-11-10 08:38:56

ಬೆಂಗಳೂರು, ನ.10: ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶದ ಬಗ್ಗೆ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಅವರಿಗೆ ಇದೀಗ ಕಾನೂನು ಸಂಕಷ್ಟ ಎದುರಾಗಿದೆ. ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್‌ ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಸಚಿವ ಜಮೀರ್‌ ಅಹ್ಮದ್‌ ಖಾನ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯಸರ್ಕಾರದ ಅಡ್ವೋಕೇಟ್ ಜನರಲ್ ಗೆ ಸೂಚನೆ ನೀಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಂ ದೂರಿನ ಮೇರೆಗೆ ಸಚಿವ ಜಮೀರ್ ಅಹಮ್ಮದ್ ಹೇಳಿಕೆ ಸಂಬಂಧ ಅಡ್ವೋಕೇಟ್ ಜನರಲ್‌ಗೆ ರಾಜ್ಯಪಾಲರು ಪತ್ರ ಬರೆದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಟಿ.ಜೆ ಅಬ್ರಾಹಂ ರಾಜ್ಯಪಾಲರಿಗೆ ದೂರು ನೀಡಿದ್ದರು. ಬಳಿಕ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಕೋರ್ಟ್​ ಮೆಟ್ಟಿಲೇರಿದ್ದರು. ಆದ್ರೆ, ಹೈಕೋರ್ಟ್​ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿತ್ತು. ಆದರೆ ಹೈಕೋರ್ಟ್ ತೀರ್ಪನ್ನು ಸಚಿವ ಜಮೀರ್ ಅಹಮ್ಮದ್ ಖಾನ್ ಟೀಕಿಸಿ ಈ ತೀರ್ಪು ರಾಜಕೀಯ ಪ್ರೇರಿತವಾಗಿದ್ದು, ಅದೊಂದು ರಾಜಕೀಯ ತೀರ್ಪು ಎಂದು ಕಿಡಿ ಕಾರಿದ್ದರು. ಆ ಹಿನ್ನೆಲೆಯಲ್ಲಿ ಮುಡಾ ದೂರುದಾರರಲ್ಲೊಬ್ಬರಾದ ಟಿ.ಜೆ ಅಬ್ರಹಾಂ ಅವರು ಸಚಿವ ಜಮೀರ್ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿ ಪಾಠ ಕಲಿಸುವುದಾಗಿ ಹೇಳಿದ್ದರು.

ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಅಲ್ಲದೇ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಟಿ.ಜೆ ಅಬ್ರಾಹಂ ಕಿಡಿಕಾರಿದ್ದರು. ಮತ್ತೊಂದು ಹೆಜ್ಜೆ ಮುಂದೆ ಹೋಗಿ ಅಬ್ರಾಹಂ ಅವರು ಸಚಿವ ಜಮೀರ್ ಅಹಮ್ಮದ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೀಗ ಈ ದೂರಿನ ಮೇರೆಗೆ ರಾಜ್ಯಪಾಲರು ಸಚಿವ ಜಮೀರ್ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

author single

L Ramprasad

Managing Director

comments

No Reviews