ಮುಡಾ ಕೇಸ್: ನಾಳೆಯಿಂದ ತನಿಖೆ ಆರಂಭಿಸಲಿರುವ ಮೈಸೂರು ಲೋಕಾಯುಕ್ತ ಎಸ್ಪಿ
2024-09-29 06:41:37
ಮೈಸೂರು, ಸೆ.29: ನಾಳೆ ಸೋಮವಾರದಿಂದ ಮುಡಾ ಕೇಸ್ ತನಿಖೆಯನ್ನು ಲೋಕಾಯುಕ್ತ ನಡೆಸಲಿದೆ.
ಈಗಾಗಲೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದ ಮೇರೆಗೆ ಮೈಸೂರು ಜಿಲ್ಲಾ ಲೋಕಾಯುಕ್ತ ಎಸ್ಪಿ ಅವರು ಮುಡಾ ಕೇಸ್ ತನಿಖೆ ಆರಂಭಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರನ್ನು ಕ್ರಮವಾಗಿ ಎ1 ಮತ್ತು ಎ2 ಎಂದು ಎಫ್ಐಆರ್ ದಾಖಲಿಸಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಸಂಬಂಧಿ ಮಲ್ಲಿಕಾರ್ಜುನ ಎ3 ಹಾಗೂ ದೇವರಾಜು ಎ4 ಎಂದು ಮೈಸೂರು ಲೋಕಾಯುಕ್ತ ಎಸ್ಪಿ ಅವರು ನಿನ್ನೆ ಶನಿವಾರ ಎಫ್ಐಆರ್ ದಾಖಲಿಸಿದ್ದರು.
ಇಂದು ಮುಡಾ ಕೇಸ್ ತನಿಖೆಯನ್ನು ಮೈಸೂರು ಲೋಕಾಯುಕ್ತ ಎಸ್ಪಿ ನಾಳೆ ಸೋಮವಾರದಿಂದ ಮುಂದುವರೆಸಲಿದ್ದಾರೆ.
ಯಾವೆಲ್ಲಾ ಸೆಕ್ಷನ್ ದಾಖಲು?
ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 166, 403, 420, 426, 465, 468, 340, 351 ಅಡಿ ಎಫ್ಐಆರ್ ದಾಖಲಾಗಿದೆ. ಹಾಗೇ ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲಾಗಿದೆ.
ಭ್ರಷ್ಟಾಚಾರ ತಡೆ ಕಾಯ್ದೆ 1988 , ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988, ಸೆಕ್ಷನ್ 120 ಬಿ ಕ್ರಿಮಿನಲ್ ಪಿತೂರಿ, ಸೆಕ್ಷನ್ 166 ಸಾರ್ವಜನಿಕ ಸೇವಕ ಕಾನೂನು ಉಲ್ಲಂಘನೆ ಮಾಡುವುದು, ಸೆಕ್ಷನ್ 403 ಆಸ್ತಿಯ ದುರ್ಬಳಕೆ, ಸೆಕ್ಷನ್ 406 ನಂಬಿಕೆಯ ಉಲ್ಲಂಘನೆ, ಸೆಕ್ಷನ್ 420 ವಂಚನೆ, ಸೆಕ್ಷನ್ 426 ದುಷ್ಕೃತ್ಯವೆಸಗುವುದು, ಸೆಕ್ಷನ್ 465 ಪೋರ್ಜರಿ, ಸೆಕ್ಷನ್ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಪೋರ್ಜರಿ, ಸೆಕ್ಷನ್ 340 ಅಕ್ರಮ ಬಂಧನ, ಸೆಕ್ಷನ್ 351 ಇತರರಿಗೆ ಹಾನಿಯನ್ನುಂಟು ಮಾಡುವುದು.
comments
Log in to write reviews