ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ಗೆ ರಾಜ್ಯಪಾಲರ ಅನುಮತಿ!

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ಗೆ ರಾಜ್ಯಪಾಲರ ಅನುಮತಿ!

2024-08-17 10:36:57

ಬೆಂಗಳೂರು, ಆ.17: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೊನೆಗೂ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದಾರೆ. 
ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ಮುಂದಿನ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್​ಗೆ ನೀಡಿರುವ ಆದೇಶದ ಅಧಿಕೃತ ಪ್ರತಿ ಇನ್ನಷ್ಟೇ ಸಿಎಂ ಕೈಗೆ ತಲುಪಬೇಕಿದೆ.

ಸದ್ಯ ಕಾವೇರಿ ನಿವಾಸದಲ್ಲೇ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿರುವ ಕಾನೂನು ಆಯ್ಕೆಗಳ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ಸಿಎಂ ಸಿದ್ದರಾಮಯ್ಯ  ಅವರು ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ದಟ್ಟವಾಗಿದೆ.

author single

L Ramprasad

Managing Director

comments

No Reviews