ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾಪನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
2024-11-12 08:20:41
ಸರ್ಕಾರಿ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ರಾಜ್ಯಸರ್ಕಾರದ ಮುಂದಿದೆ ಎಂಬ ವರದಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪಸಂಖ್ಯಾತ ಸಮುದಾಯದಿಂದ ಮೀಸಲಾತಿ ಬೇಡಿಕೆ ಬಂದಿರುವುದು ನಿಜ, ಆದರೆ ರಾಜ್ಯಸರ್ಕಾರದ ಮುಂದೆ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದರು.
ಸರ್ಕಾರದ ಗುತ್ತಿಗೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ನೀಡಲು ರಾಜ್ಯಸರ್ಕಾರ ಚಿಂತನೆ ನಡೆಸಿದೆ ಎಂಬ ಚರ್ಚೆ ನಡೆದಿತ್ತು. ಆದರೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮುಸ್ಲಿಮರಿಗೆ ಯಾವುದೇ ಮೀಸಲಾತಿ ನೀಡುವ ಪ್ರಸ್ತಾವನೆ ರಾಜ್ಯಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿರುವ ಹಿನ್ನೆಲೆಯಲ್ಲಿ ನಾಳಿನ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮುಸ್ಲಿಮರ ವೋಟ್ ಬ್ಯಾಂಕ್ ಚೆಲ್ಲಾಪಿಲ್ಲಿಯಾಗುವ ಸಾಧ್ಯತೆ ಇದೆ.
comments
Log in to write reviews