ಬಿಜೆಪಿಗೆ ರಾಜೀನಾಮೆ ನೀಡದೆ ಚನ್ನಪಟ್ಟಣದಲ್ಲಿ ಪಕ್ಷೇತರವಾಗಿ ಸ್ಪರ್ಧೆ: ಯೋಗೇಶ್ವರ್

ಬಿಜೆಪಿಗೆ ರಾಜೀನಾಮೆ ನೀಡದೆ ಚನ್ನಪಟ್ಟಣದಲ್ಲಿ ಪಕ್ಷೇತರವಾಗಿ ಸ್ಪರ್ಧೆ: ಯೋಗೇಶ್ವರ್

2024-10-21 08:00:07

ಹುಬ್ಬಳ್ಳಿ, ಅ. 21: ಬಿಜೆಪಿ ವಿಧಾನಪರಿಷತ್ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ಅವರು ರಾಜೀನಾಮೆ ನೀಡಿದ್ದಾರೆ. ಇಂದು (ಅಕ್ಟೋಬರ್ 21) ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿ ಸಭಾಪರಿ ಬಸವರಾಜ್ ಹೊರಟ್ಟಿ ಅವರಿಗೆ ರಾಜೀನಾಮೆ ನೀಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿ ಯೋಗೇಶ್ವರ್​, ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಆದರೆ, ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದರು. ಅಲ್ಲದೇ ಚನ್ನಪಟ್ಟಣದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಿಸಿದರು. ಈ ಮೂಲಕ ಜೆಡಿಎಸ್​ಗೆ ಮರ್ಮಾಘಾತ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಪಿ ಯೋಗೇಶ್ವರ್, ವಿಧಾನಪರಿಷತ್ ಸದಸ್ಯತ್ವಕ್ಕೆ ನಾನು ರಾಜೀನಾಮೆ ಕೊಟ್ಟಿದ್ದೇನೆ. ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ಅಂಗೀಕರಿಸಿದ್ದಾರೆ. ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಚುನಾವಣೆಗೆ ಸ್ಪರ್ಧಿಸಬೇಕಾದರೆ ರಾಜೀನಾಮೆ ನೀಡಬೇಕಾಗಿರುತ್ತೆ. ಹಾಗಾಗಿ ಪರಿಷತ್ ನಾಮನಿರ್ದೇಶಿತ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಅಷ್ಟೇ. ನಾನಿನ್ನೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ನಾನು ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕೆಂದು ಬಯಕೆಯಿದೆ. ನನಗೊಂದು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದೇನೆ. ನನ್ನ ಜೊತೆ ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿದ್ದಾರೆ. ಬಿಜೆಪಿಯಲ್ಲಿ 19 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ. ನನ್ನ ಸೇವೆ ಪರಿಗಣಿಸಿ ಅವಕಾಶ ನೀಡಿ ಎಂದು ಮನವಿ ಮಾಡಿದ್ದೇನೆ. ಜೆಡಿಎಸ್​ನಿಂದ ಸ್ಪರ್ಧೆಗೆ ಕಾರ್ಯಕರ್ತರ ಅಪಸ್ಪರ, ಗೊಂದಲವಿತ್ತು. ಹಾಗಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚಿಂತನೆ ನಡೆಸಿದ್ದೇನೆ ಎಂದು ತಿಳಿಸಿದರು,

ಉಪ ಚುನಾವಣೆ ಸಂದರ್ಭದಲ್ಲಿ ಊಹಾಪೋಹ ಸಹಜ, ಬೇಸರವಿಲ್ಲ. ಒಂದು ವೇಳೆ NDA ಅಭ್ಯರ್ಥಿಯಾಗಲು ಅವಕಾಶ ನೀಡಿದರೂ ಸರಿ. ನಾನಿನ್ನೂ ಬಿಜೆಪಿಯಲ್ಲೇ ಇದ್ದೇನೆ, ನಾಯಕರು ಮಾತನಾಡುತ್ತಿದ್ದಾರೆ. ಮುಂದೆ ಏನಾಗುತ್ತೋ ನೋಡೋಣ ಎಂದು ಹೇಳಿದರು.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುವೆ. ಈವರೆಗೆ ನಾನು ಯಾರೊಬ್ಬರ ಜೊತೆಗೂ ಸಂಪರ್ಕ ಮಾಡಿಲ್ಲ. ಸ್ವಇಚ್ಛೆಯಿಂದ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಉತ್ಸುಕನಾಗಿದ್ದೇನೆ. ಬಿಜೆಪಿ ನಾಯಕರು ನನಗೆ ಅವಕಾಶ ಮಾಡಿಕೊಡಬೇಕು. ನಾಳೆ ಏನಾಗುತ್ತದೆ ಎಂದು ಹೇಳಲು ಆಗಲ್ಲವೆಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

author single

L Ramprasad

Managing Director

comments

No Reviews