ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ವಿಶೇಷ ಕೋರ್ಟ್
2024-09-05 12:08:27
ಬೆಂಗಳೂರು, ಸೆ.4: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.
ಅತ್ಯಾಚಾರ ಕೇಸ್ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿ ಜಡ್ಜ್ ಸಂತೋಷ್ ಗಜಾನನ ಭಟ್ ವಜಾಗೊಳಿಸಿದ್ದಾರೆ.
ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲಾಗಿತ್ತು. ಇತ್ತೀಚೆಗೆ ಕೂಡ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆಗಲೂ ವಿಚಾರಣೆ ಮಾಡಿದ್ದ ಜಡ್ಜ್ ಸಂತೋಷ್ ಗಜಾನನ ಭಟ್ ಅರ್ಜಿಯನ್ನು ವಜಾಗೊಳಿಸಿದ್ದರು.
ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ನ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಆರೋಪ ಕೇಳಿಬರ್ತಿದ್ದಂತೆ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ನಂತ್ರ ಎಸ್ಐಟಿ ಮುಂದೆ ವಿಚಾರಣೆ ಎದುರಿಸಿದ್ದರು. ಬಳಿಕ ಪ್ರಜ್ವಲ್ನ ಕರ್ಮಕಾಂಡಗಳು ಚಾರ್ಜ್ಶೀಟ್ ಮೂಲಕ ಬಯಲಾಗಿವೆ. ತನಿಖೆ ಕೈಗೆತ್ತಿಕೊಂಡು ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸುವ ಮೂಲಕ ಸುಮಾರು 2 ಸಾವಿರ ಪುಟಗಳ ಚಾರ್ಜ್ಶೀಟ್ನ್ನು ಅಧಿಕಾರಿಗಳು ಸಲ್ಲಿಸಿದ್ದಾರೆ.
ಬಸವನಗುಡಿ ಮನೆಯಲ್ಲಿ ಪ್ರಜ್ವಲ್ ಅತ್ಯಾಚಾರ ಎಸಗಿದ್ದ. ಮನೆ ಕ್ಲೀನ್ ಮಾಡಲು ಬಂದಿದ್ದಾಕೆ ಮೇಲೆ ಎರಗಿದ್ದ. ಕ್ಲೀನ್ ಮಾಡಲೆಂದು ಮನೆಗೆ ಬಂದಿದ್ದ ಮಹಿಳೆ ಮೇಲೆ, ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದಾಗ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರ ಬಳಿಕ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಯಾರಿಗೂ ಹೇಳದಂತೆ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದರಂತೆ. ಯಾರಿಗಾದ್ರೂ ಹೇಳಿದ್ರೆ ನಿನ್ನ ಪತಿಯನ್ನು ಜೈಲಿಗೆ ಕಳಿಸುವುದಾಗಿ ಬೆದರಿಸಿದ್ದರಂತೆ, ಇಷ್ಟೆ ಅಲ್ಲದೆ ಪ್ರಜ್ವಲ್, ಸಂತ್ರಸ್ತೆ ಮಗಳಿಗೂ ವಿಡಿಯೋ ಕರೆ ಮಾಡಿ ಲೈಂಗಿಕ ಕಿರುಕುಳ ಕೊಟ್ಟಿದ್ದ ಅನ್ನೋದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ
comments
Log in to write reviews