ಬೈಎಲೆಕ್ಷನ್ ಬಳಿಕ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ: ಕೇಂದ್ರ ಸಚಿವ ಎಚ್.ಡಿ.ಕೆ ಬಾಂಬ್

ಬೈಎಲೆಕ್ಷನ್ ಬಳಿಕ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ: ಕೇಂದ್ರ ಸಚಿವ ಎಚ್.ಡಿ.ಕೆ ಬಾಂಬ್

2024-10-30 08:56:55

ರಾಮನಗರ, ಅ.30: 2028ರವರೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಯಲ್ಲ, ಮತ್ತೆ ನಾನೇ ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದರು. ಈ ಹೇಳಿಕೆ ಕಾಂಗ್ರೆಸ್​​ನಲ್ಲಿ ಮಾತ್ರವಲ್ಲದೇ ರಾಜ್ಯ ಬಿಜೆಪಿಯಲ್ಲೂ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಇದೀಗ ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್​​-ಬಿಜೆಪಿ ಮೈತ್ರಿ ಗೆದ್ದರೆ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ಗವರ್ನರ್ ಆಳ್ವಿಕೆ ಜಾರಿಯಾಗಬಹುದು ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಇಂದು ನಡೆದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಉಪಚುನಾವಣೆಯಲ್ಲಿ ನಾವು 3 ಕ್ಷೇತ್ರ ಗೆದ್ದರೆ ಈ ಸರ್ಕಾರ ಉಳಿಯಲ್ಲ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ಗವರ್ನರ್ ಆಳ್ವಿಕೆ ಜಾರಿಯಾಗಬಹುದು. ರಾಜ್ಯದಲ್ಲಿ ಮುಂದೆ ಏನು ಆಗುತ್ತದೆ? ಅನ್ನೋದು ದೇವರ ಇಚ್ಛೆ ಎಂದು ಹೇಳಿದರು.

ಮೋದಿ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ಪ್ರಧಾನಿ ಮೋದಿಗಾಗಿ ನಾವು 3 ಕ್ಷೇತ್ರಗಳಲ್ಲಿ ಗೆಲ್ಲಬೇಕು. ಬಿಜೆಪಿ -ಜೆಡಿಎಸ್ ಕಾರ್ಯಕರ್ತರ ಮೇಲೆ ನಂಬಿಕೆ ಇದೆ, ಮೋದಿ- ದೇವೇಗೌಡರ ನಾಯಕತ್ವಕ್ಕೆ ಬೆಂಬಲ ಸಿಗಲಿದೆ ಅನ್ನೋ ವಿಶ್ವಾಸ ಇದೆ. ಯಡಿಯೂರಪ್ಪ ಅವರು ಹಬ್ಬ ಮುಗಿದ ಮೇಲೆ ಪ್ರಚಾರಕ್ಕೆ ಬರಲಿದ್ದಾರೆ. ಬಿಜೆಪಿ -ಜೆಡಿಎಸ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಬಿಜೆಪಿ-ಜೆಡಿಎಸ್ ಸಂಬಂಧ ಅಧಿಕಾರಕ್ಕಾಗಿ ಅಲ್ಲ. ಇದು ರಾಜ್ಯದ ಅಭಿವೃದ್ಧಿಗಾಗಿ ಆಗಿರುವುದು. ಬಿಜೆಪಿ ಜೆಡಿಎಸ್ ನಡುವೆ ಉತ್ತಮ ಬಾಂಧವ್ಯ ಇದೆ. ಬಿಜೆಪಿ- ಜೆಡಿಎಸ್ ಅಣ್ಣ-ತಮ್ಮಂದಿರಂತೆ ಇದ್ದೇವೆ. ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯಲು ನಮ್ಮ ಮೈತ್ರಿ. ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿ ಅಲ್ಲ, ಎನ್​ಡಿಎ ಅಭ್ಯರ್ಥಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.

author single

L Ramprasad

Managing Director

comments

No Reviews