ಸೆ.14 ರವರೆಗೆ ರಾಜ್ಯದ ಹಲವೆಡೆ ಮಳೆ
2024-09-11 10:07:40
ಬೆಂಗಳೂರು, ಸೆ.11: ಮುಂದಿನ 48 ಗಂಟೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಜೊತೆ ಮಳೆ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗುವ ಸಂಭವವಿದೆ. ಇನ್ನು ತಾಪಮಾನ ಗರಿಷ್ಠ 30 ಡಿಗ್ರಿ, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 14ರವರೆಗೆ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೊತೆಗೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ.
comments
Log in to write reviews