ರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ

ರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ

2024-09-04 01:43:18

ಬೆಂಗಳೂರು, ಸೆ.4: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪೊಲೀಸರು 3,991 ಪುಟಗಳ ಚಾರ್ಜ್​ಶೀಟ್​​ ಸಲ್ಲಿಕೆ ಮಾಡಿದ್ದಾರೆ. 

ಇಂದು (ಸೆಪ್ಟೆಂಬರ್ 4) ಬೆಳಿಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ಗೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. 

ಈ ಮೊದಲು ಎಫ್​ಐಆರ್​ ಹಾಕುವಾಗ ದರ್ಶನ್ ಎ2 ಆರೋಪಿ ಆಗಿದ್ದರೆ, ಪವಿತ್ರಾ ಗೌಡ ಎ1 ಆರೋಪಿ ಆಗಿದ್ದರು. ಇದನ್ನು ಚಾರ್ಜ್​ಶೀಟ್​ನಲ್ಲಿ ಬದಲಿಸಬಹುದು ಎಂದು ಊಹಿಸಲಾಗಿತ್ತು. ದರ್ಶನ್ ಎ1 ಹಾಗೂ ಪವಿತ್ರಾ ಎ2 ಆಗಲಿದ್ದಾರೆ ಎನ್ನಲಾಗಿತ್ತು. ಆದರೆ ಎಸಿಪಿ ಚಂದನ್​​ ಕುಮಾರ್ ಹಾಗೂ ತನಿಖಾ ತಂಡ ದರ್ಶನ್ ಅವರನ್ನು 2ನೇ ಆರೋಪಿ ಆಗಿ ಉಲ್ಲೇಖ ಮಾಡಿದೆ. ಇದರಿಂದ ಪವಿತ್ರಾಗೌಡ ಅವರು ಎ1 ಆರೋಪಿ ಆಗಿ ಮುಂದುವರೆದಿದ್ದಾರೆ. ಇದರಿಂದ  ದರ್ಶನ್ ಅವರ ಅಭಿಮಾನಿಗಳು ಕೊಂಚ ನಿಟ್ಟುಸಿರು ಬಿಡುವಂತಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಭಾಗಿಯಾದ 17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. ಮೂವರನ್ನು ಪ್ರತ್ಯಕ್ಷ ಸಾಕ್ಷಿಗಳು ಎಂದು ಉಲ್ಲೇಖಿಸಲಾಗಿದೆ. FSL ಮತ್ತು CFSL ನಿಂದ 8 ವರದಿಗಳು ಇವೆ. ಈ ಪ್ರಕರಣದಲ್ಲಿ ಒಟ್ಟು 231 ಸಾಕ್ಷಿಗಳನ್ನು ನಮೂದಿಸಲಾಗಿದೆ. ಅದರೆ ರೇಣುಕಾಸ್ವಾಮಿ ಕೊಲೆ ಕೇಸ್​ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಹೀಗಾಗಿ CRPC 173(8) ಅಡಿಯಲ್ಲಿ ಪ್ರಿಲಿಮಿನರಿ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ. ಈ ಬಗ್ಗೆ ವಿಶೇಷ ಕೋರ್ಟ್​ಗೆ ಹಾಗೂ ಸರ್ಕಾರಕ್ಕೆ ಪೊಲೀಸರು ಮನವಿ ಮಾಡಲಿದ್ದಾರೆ.‌

ರೇಣುಕಾಸ್ವಾಮಿಯನ್ನು ಮೊದಲು ಕಿಡ್ನಾಪ್ ಮಾಡಿಸಿ, ಹಲ್ಲೆ ಮಾಡಿದ್ದು, ಕೊಲೆ ಬಳಿಕ ಮುಚ್ಚಿಹಾಕಲು ಹಣ ನೀಡಿದ್ದು ದರ್ಶನ್ ಅನ್ನೋದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಆಗಿದೆ. ದರ್ಶನ್ ಬಟ್ಟೆ ಮತ್ತು ಶೂನಲ್ಲಿ ರೇಣುಕಾಸ್ವಾಮಿ ಅವರ ರಕ್ತ ಇರುವುದು ಪತ್ತೆ ಆಗಿದೆ. ಇದರಿಂದ ದರ್ಶನ್ ಹಲ್ಲೆ ಮಾಡಿರುವ ಬಗ್ಗೆ ಮತ್ತು ಕೊಲೆಯಲ್ಲಿ ಭಾಗಿಯಾದ ಬಗ್ಗೆ ಖಚಿತ ಮಾಹಿತಿ ಸಿಕ್ಕಂತೆ ಆಗಿದೆ.

ಕೊಲೆ ಮಾಡಲು ಮೂಲ ಕಾರಣ ಪವಿತ್ರಾಗೌಡ. ಹೀಗಾಗಿ, ಅವರು ಎ1 ಆಗಿದ್ದಾರೆ. ಹಲ್ಲೆ ನಡೆಯುವ ಸ್ಥಳದಲ್ಲಿ ಪವಿತ್ರಾಗೌಡ ಅವರು ಹಾಜರಿದ್ದರು. ಆಗ ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಅವರು ಹೊಡೆದಿದ್ದಾರೆ. ಕೃತ್ಯ ನಡೆದ ಸಮಯದಲ್ಲಿ ಪವಿತ್ರಾಗೌಡ  ಅಲ್ಲೇ ಇರುವುದಕ್ಕೆ ಸಾಕ್ಷಿ ಸಿಕ್ಕಿದೆ. ಪವಿತ್ರಾಗೌಡ  ಮೊಬೈಲ್ ಕೊಲೆಯಾದ ಸ್ಥಳದಲ್ಲಿ ಆಕ್ಟೀವ್ ಆಗಿತ್ತು ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

author single

L Ramprasad

Managing Director

comments

No Reviews