ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

2024-11-07 10:13:51

ಬೆಂಗಳೂರು, ನ.7: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-2 ಆರೋಪಿ ನಟ ದರ್ಶನ್​ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 
ಇದೇ ಪ್ರಕರಣದ ಇತರೆ 4 ಆರೋಪಿಗಳಿಗೆ ನಿಯಮಿತ ಜಾಮೀನು ಈಗಾಗಲೇ ಮಂಜೂರಾಗಿದೆ. ಪ್ರಕರಣದಲ್ಲಿ ಎ-1 ಆರೋಪಿಯಾ ನ್ಯಾಯಾಂಗ ಬಂಧನದಲ್ಲಿರುವ ನಟಿ ಪವಿತ್ರಾಗೌಡ ಸಹ ಜಾಮೀನಿಗೆ ಯತ್ನಿಸುತ್ತಲೇ ಇದ್ದಾರೆ. ಈ ಹಿಂದೆ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಪವಿತ್ರಾಗೌಡ ಅವರ ಜಾಮೀನು ಅರ್ಜಿ ವಜಾಗೊಂಡಿತ್ತು. ಅದರೆ ಮತ್ತೆ ಹೈಕೋರ್ಟ್​ನಲ್ಲಿ ಪವಿತ್ರಾಗೌಡ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಇಂದು (ನವೆಂಬರ್ 07) ಪವಿತ್ರಾಗೌಡ ಜಾಮೀನು ಅರ್ಜಿಯ ವಿಚಾರಣೆ ಹೈಕೋರ್ಟ್​ನಲ್ಲಿ ನಡೆದಿದ್ದು, ಮುಂದಿನ ವಿಚಾರಣೆಯನ್ನು ನವೆಂಬರ್ 21ಕ್ಕೆ ಮುಂದೂಡಿಕೆ ಮಾಡಲಾಗಿದೆ. ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಯಲ್ಲಿ ಹೆಚ್ಚಿನ ವಾದ-ವಿವಾದ ಇಂದು ನಡೆದ ಬಗ್ಗೆ ವರದಿಯಾಗಿಲ್ಲ.

ಪ್ರಕರಣದ 2ನೇ ಆರೋಪಿ ದರ್ಶನ್​ಗೆ ಮಧ್ಯಂತರ ಜಾಮೀನು ಮಂಜೂರಾಗಿರುವ ಕಾರಣ ಅದೇ ಕಾರಣವನ್ನು ಇಟ್ಟುಕೊಂಡು ಪವಿತ್ರಾಗೌಡ ಸಹ ಜಾಮೀನಿಗೆ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಇಂದು ಅವರಿಗೆ ನಿರಾಶೆಯಾಗಿದೆ. ಪವಿತ್ರಾಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಲಾಗಿದೆ. ಪವಿತ್ರಾ ಗೌಡ ಪ್ರಸ್ತುತ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 11 ರಂದು ಪವಿತ್ರಾ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಪವಿತ್ರಾ ಗೌಡ ಮೊದಲ ಆರೋಪಿಯಾಗಿದ್ದಾರೆ. ರೇಣುಕಾಸ್ವಾಮಿ, ನಟ ದರ್ಶನ್ ಅವರಿಗೆ 2ನೇ ಪತ್ನಿಯ ರೀತಿ ಇದ್ದ ನಟಿ ಪವಿತ್ರಾಗೌಡ ಅವರಿಗೆ ಕೆಟ್ಟದಾಗಿ ಸಂದೇಶ ಕಳಿಸಿದ್ದನೆಂಬ ಕಾರಣಕ್ಕೆ ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಅಪಹರಣ ಮಾಡಿ ಕರೆತಂದು ಇಲ್ಲಿ ಹಲ್ಲೆ ಮಾಡಿ ಕೊಲ್ಲಲಾಗಿದೆ ಎಂಬ ಆರೋಪವಿದೆ.

author single

L Ramprasad

Managing Director

comments

No Reviews