ಮೋದಿ ಕಿವಿ ಇಂಡಿದ ಆರ್.ಎಸ್.ಎಸ್!?
2024-08-17 11:04:57
ನಾಗಪುರ, ಆಗಸ್ಟ್ 16: ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತ ಸಮುದಾಯದ ರಕ್ಷಣೆಯನ್ನು ಭಾರತ ಖಚಿತಪಡಿಸಿಕೊಳ್ಳಬೇಕು. ಆ ಜವಾಬ್ದಾರಿ ಭಾರತಕ್ಕಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ಮಾಡಿ ಭಾಗವತ್ ಈ ಮಾತುಗಳನ್ನು ಹೇಳಿದ್ದಾರೆ. ಬಾಂಗ್ಲಾ ದೇಶದಲ್ಲಿ ಹಿಂದೂಗಳು ಯಾವುದೇ ಅನ್ಯಾಯ ಮತ್ತು ದೌರ್ಜನ್ಯಗಳನ್ನು ಎದುರಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ಭಾರತದ್ದಾಗಿದೆ. ಅಲ್ಲಿನ ಹಿಂದುಗಳ ರಕ್ಷಣೆಯನ್ನು ಭಾರತ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದರು.
ಮುಂಬರುವ ಪೀಳಿಗೆಯು 'ಸ್ವತಂತ್ರ'(ಸ್ವಾತಂತ್ರ್ಯ) ಪದದ 'ಸ್ವಾ'ವನ್ನು ರಕ್ಷಿಸುವ ಕರ್ತವ್ಯ ಹೊಂದಿದೆ. ಏಕೆಂದರೆ ಜಗತ್ತಿನಲ್ಲಿ ಯಾವಾಗಲೂ ಇತರ ದೇಶಗಳ ಮೇಲೆ ಪ್ರಾಬಲ್ಯ ಸಾಧಿಸಲು ಬಯಸುವ ಜನ ಇರುತ್ತಾರೆ. ಹೀಗಾಗಿ ನಾವು ಜಾಗರೂಕರಾಗಿರಬೇಕು ಮತ್ತು ಅವರಿಂದ ನಮ್ಮನ್ನು ರಕ್ಷಿಸಿಕೊಳ್ಳಬೇಕು ಎಂದರು.
ಪರಿಸ್ಥಿತಿ ಎಲ್ಲ ಕಾಲದಲ್ಲೂ ಒಂದೇ ರೀತಿ ಇರುವುದಿಲ್ಲ. ನಾವು ಈಗ ನೆರೆಯ ದೇಶದ ಪರಿಸ್ಥಿತಿಯನ್ನು ನೋಡುತ್ತಿದ್ದೇವೆ. ಅಲ್ಲಿ ಸಾಕಷ್ಟು ಹಿಂಸಾಚಾರಗಳು ನಡೆಯುತ್ತಿವೆ. ಹಿಂದುಗಳು ವಿನಾಕಾರಣ ಟಾರ್ಗೆಟ್ ಆಗುತ್ತಿದ್ದಾರೆ. ಅಲ್ಲಿ ವಾಸಿಸುವ ಹಿಂದೂಗಳು ಯಾವುದೇ ಕಾರಣವಿಲ್ಲದೆ ಹಿಂಸಾಚಾರದ ಪರಿಣಾಮ ಎದುರಿಸುತ್ತಿದ್ದಾರೆ ಎಂದು ಭಾಗವತ್ ಹೇಳಿದ್ದಾರೆ.
ಭಾರತವು ಇತರರಿಗೆ ಸಹಾಯ ಮಾಡುವ ಸಂಪ್ರದಾಯವನ್ನು ಹೊಂದಿದೆ. ಕಳೆದ ಕೆಲವು ವರ್ಷಗಳಲ್ಲಿ ಭಾರತವು ಯಾರ ಮೇಲೂ ದಾಳಿ ಮಾಡಿಲ್ಲ. ಆದರೆ ತೊಂದರೆಯಲ್ಲಿರುವವರಿಗೆ ಅವರು ನಮ್ಮೊಂದಿಗೆ ಹೇಗೆ ವರ್ತಿಸುತ್ತಾರೆ ಎಂಬುದನ್ನು ಲೆಕ್ಕಿಸದೆ ಸಹಾಯ ಮಾಡಿದೆ ಎಂದು ಭಾಗವತ್ ನೆನಪಿಸಿದರು.
comments
Log in to write reviews