ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಚಾರ್ಜ್ ಶೀಟ್ ಸಲ್ಲಿಸಿದ ಎಸ್ಐಟಿ
2024-09-10 10:04:54
ಬೆಂಗಳೂರು, ಸೆ.9: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆ ಅತ್ಯಾಚಾರ ಕೇಸ್ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳಿಂದ ಮತ್ತೊಂದು ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ.
113 ಸಾಕ್ಷಿಗಳನ್ನು ಒಳಗೊಂಡ 1,632 ಪುಟಗಳ ಚಾರ್ಜ್‌ಶೀಟ್ ಅನ್ನು ತನಿಖಾಧಿಕಾರಿ ಶೋಭಾರಿಂದ ಸಲ್ಲಿಕೆ ಮಾಡಲಾಗಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಕೇಸ್ಗೆ ಸಂಬಂಧಿಸಿದಂತೆ ಇತ್ತೀಚಿಗೆ ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಒಳಗೊಂಡ ಸುಮಾರು 2 ಸಾವಿರ ಪುಟಗಳ ಚಾರ್ಜ್ಶೀಟ್ನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಸಲ್ಲಿಸಿದ್ದರು. ಇದೀಗ ಸೋಮವಾರದಂದು 2ನೇ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ 3 ಪ್ರಕರಣಗಳ ಬಗ್ಗೆ ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಸದ್ಯ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮೇ 30 ರಂದು ಜರ್ಮನಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಜ್ವಲ್ ರೇವಣ್ಣನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು.
ಆರೋಪ ಕೇಳಿಬರ್ತಿದ್ದಂತೆ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಬಳಿಕ ಎಸ್‌ಐಟಿ ಮುಂದೆ ವಿಚಾರಣೆ ಎದುರಿಸಿದ್ದರು. ಇದಾದ ನಂತರ ಪ್ರಜ್ವಲ್‌ನ ಕರ್ಮಕಾಂಡಗಳು ಚಾರ್ಜ್‌ಶೀಟ್ ಮೂಲಕ ಬಯಲಾಗಿದ್ದವು.
ಬಸವನಗುಡಿ ಮನೆಯಲ್ಲಿ ಪ್ರಜ್ವಲ್ ಅತ್ಯಾಚಾರ ಎಸಗಿದ್ದರು. ಮನೆ ಕ್ಲೀನ್ ಮಾಡಲು ಬಂದಿದ್ದಾಕೆ ಮೇಲೆ ಎರಗಿದ್ದ. ಕ್ಲೀನ್ ಮಾಡಲೆಂದು ಮನೆಗೆ ಬಂದಿದ್ದ ಮಹಿಳೆ ಮೇಲೆ, ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದಾಗ ಅತ್ಯಾಚಾರ ಎಸಗಿದ್ದರು. ರೇಪ್ ಬಳಿಕ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದರು. ಯಾರಿಗೂ ಹೇಳದಂತೆ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದರಂತೆ. ಯಾರಿಗಾದ್ರೂ ಹೇಳಿದ್ರೆ ನಿನ್ನ ಪತಿಯನ್ನು ಜೈಲಿಗೆ ಕಳಿಸುವುದಾಗಿ ಬೆದರಿಸಿದ್ದರು.
ಇಷ್ಟೆ ಅಲ್ಲದೇ ಪ್ರಜ್ವಲ್, ಸಂತ್ರಸ್ತೆ ಮಗಳಿಗೂ ವಿಡಿಯೋ ಕರೆ ಮಾಡಿ ಲೈಂಗಿಕ ಕಿರುಕುಳ ಕೊಟ್ಟಿದ್ದ ಅನ್ನೋದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿತ್ತು. ಇನ್ನು ಸಾಕ್ಷ್ಯನಾಶ ಮಾಡುವ ಸಲುವಾಗಿಯೇ ಪ್ರಜ್ವಲ್ ವಿದೇಶಕ್ಕೆ ತೆರಳಿದ್ದ ಎಂದು ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿನ ಕೇಸ್ನ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿತ್ತು.
comments
Log in to write reviews