ಇವರೇ ಚನ್ನಪಟ್ಟಣ ಉಪಚುನಾವಣೆಗೆ ಎನ್.ಡಿ.ಎ ಅಭ್ಯರ್ಥಿ!!!
2024-10-20 04:43:07
ಬೆಂಗಳೂರು, ಅ.20: ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿ ಆಯ್ಕೆ ಬಗ್ಗೆ ಜೆಡಿಎಸ್ ಹಾಗೂ ಬಿಜೆಪಿ ನಡುವೆ ಕಗ್ಗಂಟಾಗಿದೆ. ಕ್ಷೇತ್ರದಲ್ಲಿ 5 ಬಾರಿ ಶಾಸಕರಾಗಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಶತಾಯಗತಾಯ ಎನ್.ಡಿ.ಎ ಟಿಕೆಟ್ಗಾಗಿ ಪಟ್ಟು ಹಿಡಿದಿದ್ದು, ಜೆಡಿಎಸ್ಗೆ ನುಂಗಲಾರದ ತುತ್ತಾಗಿದೆ. ಮತ್ತೊಂದೆಡೆ ಜೆಡಿಎಸ್ನಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾತು ಕೇಳಿಬರುತ್ತಿದೆಯಾದರೂ, ಯೋಗೇಶ್ವರ್ ಹಠವೇ ಮೇಲುಗೈ ಸಾಧಿಸುವ ಸಾಧ್ಯತೆ ಇದೆ. ಈಗಾಗಲೇ ಹಲವು ಸಭೆ ನಡೆದಿದ್ದು, ಜೆಡಿಎಸ್-ಬಿಜೆಪಿ ಸಮನ್ವಯ ಸಭೆಯಲ್ಲಿ ಅಂತಿಮ ನಿರ್ಧಾರ ಪ್ರಕಟವಾಗಲಿದೆ. ಜೆಡಿಎಸ್ ಚಿನ್ಹೆಯಡಿ ಯೋಗೇಶ್ವರ್ ಸ್ಪರ್ಧಿಸುವುದು ಬಹುತೇಕ ಖಚಿತ ಎಂಬ ಮಾಹಿತಿ ಮೂಲಗಳಿಂದ ದೊರಕಿದೆ..
ಇದಕ್ಕೆ ಪೂರಕವಾಗಿ ನಿಖಿಲ್ ಕುಮಾರಸ್ವಾಮಿ ತ್ಯಾಗದ ಮಾತನಾಡಿದ್ದಾರೆ. ಇನ್ನು, ಪ್ರೀತಿ, ವಿಶ್ವಾಸದಿಂದ ಎಲೆಕ್ಷನ್ ನಡೆಯಬೇಕು ಅಂತ ಹೆಚ್ಡಿಕೆ ಹೇಳಿದ್ರೆ, ಯೋಗೇಶ್ವರ್ಗೆ ಅನ್ಯಾಯ ಆಗ್ಬಾರದು ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬ್ಯಾಟಿಂಗ್ ಮಾಡಿದ್ದಾರೆ.
ಯೋಗೇಶ್ವರ್ ಕಣಕ್ಕಿಳಿಸಲು ಜೆಡಿಎಸ್ ನಿರ್ಧಾರ!
ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಬೈಎಲೆಕ್ಷನ್ ಪೈಕಿ ಈಗಾಗಲೇ ಬಿಜೆಪಿ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರ ಮತ್ತು ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಹೀಗಾಗಿ ಇಂದು ಭಾನುವಾರ ಸಂಜೆಯೊಳಗೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಎನ್.ಡಿ.ಎ ಅಭ್ಯರ್ಥಿ ಘೋಷಣೆ ಮಾಡುವ ಸಾಧ್ಯತೆಗಳು ಹೆಚ್ಚಿವೆ. ಚನ್ನಪಟ್ಟಣದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್ ಸ್ಪರ್ಧೆ ಮಾಡಿದರೆ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ ಮಾಡಿದಂತೆ ಆಗುತ್ತದೆ . ಇದರಿಂದ ಜೆಡಿಎಸ್ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗುತ್ತದೆ. ಹೀಗಾಗಿ ಮೈತ್ರಿ ಧರ್ಮ ಪಾಲನೆ ಮಾಡಲು ಜೆಡಿಎಸ್ ಚಿಹ್ನೆಯಿಂದ ಸಿ.ಪಿ ಯೋಗೇಶ್ವರ್ ಸ್ಪರ್ಧೆ ಸಾಧ್ಯತೆ ಇದೆ. ನಿನ್ನೆ ನಡೆದ ಸಮನ್ವಯ ಸಭೆಯಲ್ಲೂ ಕೂಡ ಸಿ.ಪಿ ಯೋಗೇಶ್ವರ್ ಜೆಡಿಎಸ್ ನಿಂದ ಸ್ಪರ್ಧೆ ಮಾಡುವ ಬಗ್ಗೆ ಹೆಚ್ಚಿನ ಚರ್ಚೆಯಾಗಿದೆ. ಹೀಗಾಗಿ ಜೆಡಿಎಸ್ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್ ಸ್ಪರ್ಧೆ ಸಾಧ್ಯತೆ ಹೆಚ್ವಿವೆ.
ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಬಿ.ವೈ. ವಿಜಯೇಂದ್ರ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಅಭ್ಯರ್ಥಿ ವಿಚಾರವಾಗಿ ತಾವು ಯಾವುದೇ ಡಿಮ್ಯಾಂಡ್ ಇಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದರೆ. ನಿಮ್ಮ ಕ್ಷೇತ್ರವಾಗಿರುವ ಕಾರಣ ನೀವೇ ಚರ್ಚಿಸಿ ತೀರ್ಮಾನ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ವಿಧಾನಸಭೆಯ ವಿ.ಪಕ್ಷ ನಾಯಕ ಆರ್. ಅಶೋಕ್ ಸಲಹೆ ನೀಡಿದ್ದಾರೆ.
ಬಿಜೆಪಿ ಹೈಕಮಾಂಡ್ ಸರ್ವೇ ಬೇಕಾದರೂ ನಡೆಸಲಿ ನಂತರ ತೀರ್ಮಾನ ಮಾಡಲಿ ಎಂದು ಸಭೆಯಲ್ಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಬಿಜೆಪಿ ನಾಯಕರಿಗೆ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚನ್ನಪಟ್ಟಣ ಕ್ಷೇತ್ರ ಬಾಕಿ ಇರಿಸಿರುವ ಕಾರಣ ಜೆಡಿಎಸ್ ಅಭ್ಯರ್ಥಿ ಸ್ಪರ್ಧೆ ಬಹುತೇಕ ಖಚಿತವಾಗಿದೆ.
ಇನ್ನು, ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕುರಿತು, ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕ್ಲೋಸ್ಡ್ ಡೋರ್ ಸಭೆ ನಡೆಸಿದ್ದ, ಈ ಸಭೆಯಲ್ಲಿ ಡಿ.ಕೆ ಸುರೇಶ್ರತ್ತ ಮುಖಂಡರು ಒಲವು ತೋರಿದ್ದಾರೆ. ಸಭೆ ಬಳಿಕ ನಗುತ್ತಲೇ ಡಿಸಿಎಂ ಡಿಕೆಶಿ ಹೊರಬಂದು ಮಾಧ್ಯಮಗಳ ಜೊತೆ ಮಾತನಾಡಿ, ಜೆಡಿಎಸ್ನವರು ಹೆದರಿಕೊಂಡು ಶರಣಾಗಿದ್ದಾರೆ ಎಂದು ಚನ್ನಪಟ್ಟಣದಲ್ಲಿ ಯೋಗೇಶ್ವರ್ ಸ್ಪರ್ಧೆ ಬಗ್ಗೆ ಸುಳಿವು ಕೊಟ್ಟರು. ಅಷ್ಟೇ ಅಲ್ಲ, ಚನ್ನಪಟ್ಟಣದಲ್ಲಿ ಡಿ.ಕೆ ಸುರೇಶ್ ಅವರನ್ನೇ ಅಭ್ಯರ್ಥಿಯನ್ನಾಗಿಸಬೇಕು ಎನ್ನುವ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ನಾವು ಯಾರನ್ನ ಅಭ್ಯರ್ಥಿ ಎಂದು ಹೇಳುತ್ತೇವೋ ಅವರೇ ಫೈನಲ್ ಎಂದಿದ್ದಾರೆ.
ಒಟ್ಟಾರೆ ಈ ಬಾರಿ ಚನ್ನಪಟ್ಟಣ ಬೈಎಲೆಕ್ಷನ್ ನಲ್ಲಿ ಗೆಲ್ಲುವ ಕುದುರೆ ಎನಿಸಿರುವ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ದೃಢ ನಿರ್ಧಾರ ಕೈಗೊಂಡಿದ್ದಾರೆ. ಇದಕ್ಕೆ ಎದಿರೇಟು ಎಂಬಂತೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸತತ 2 ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರನ್ನೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೊನೆ ಕ್ಷಣದಲ್ಲಿ ಆಫರ್ ನೀಡಲು ಮುಂದಾಗಿದ್ದಾರೆ.
comments
Log in to write reviews