ವಾಲ್ಮೀಕಿ ನಿಗಮದ ಹಗರಣ: ಕೋರ್ಟ್ ಗೆ ತನಿಖಾ ವರದಿ ಸಲ್ಲಿಸಿದ ಇ.ಡಿ
2024-10-09 09:53:40
ಬೆಂಗಳೂರು, ಅ.9: ವಾಲ್ಮೀಕಿ ನಿಗಮದಲ್ಲಿನ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕೇಂದ್ರ ಜಾರಿ ನಿರ್ದೇಶಾನಾಲಯ ಇದೀಗ ವರದಿ ಸಲ್ಲಿಸಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಇ.ಡಿ ಮಾಹಿತಿ ಹಂಚಿಕೊಂಡಿದ್ದು, ಇ.ಡಿ ಸಲ್ಲಿಸಿರುವ ವರದಿಯನ್ನು ವಿಶೇಷ ಕೋರ್ಟ್ ಪರಿಜ್ಞಾನಕ್ಕೆ ಪಡೆದುಕೊಂಡಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಪ್ರಕರಣದಲ್ಲಿ ಸಚಿವರಾಗಿದ್ದ ಬಿ.ನಾಗೇಂದ್ರರ ತಲೆದಂಡವೂ ಆಗಿತ್ತು. ಇತ್ತೀಚೆಗೆ ಇ.ಡಿ ಬೆಂಗಳೂರಿನ 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಚಾರ್ಜ್ಶೀಟ್ ಕೂಡ ಸಲ್ಲಿಕೆ ಮಾಡಿತ್ತು. ಅದರಲ್ಲಿ ಪ್ರಕರಣದ ಮಾಸ್ಟರ್ ಮೈಂಡ್ ಮಾಜಿ ಸಚಿವ ಬಿ.ನಾಗೇಂದ್ರರೇ ಆಗಿದ್ದಾರೆ ಎಂದು ಉಲ್ಲೇಖ ಮಾಡಲಾಗಿತ್ತು.
ಮಾಜಿ ಸಚಿವ ಬಿ.ನಾಗೇಂದ್ರ ಮೇಲೆ ಆರೋಪ ಹೊರಿಸಿ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿತ್ತು. ಚಾರ್ಜ್ಶೀಟ್ನಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಪ್ರಕರಣದ ಮಾಸ್ಟರ್ ಮೈಂಡ್ ಎಂದು ಉಲ್ಲೇಖ ಮಾಡಲಾಗಿತ್ತು. ಇ.ಡಿ ಚಾರ್ಜ್ಶೀಟ್ನಲ್ಲಿ ವಾಲ್ಮೀಕಿ ನಿಗಮ ಹಗರಣದ ಸಂಪೂರ್ಣ ಮಾಹಿತಿ ಉಲ್ಲೇಖ ಮಾಡಲಾಗಿತ್ತು. ಸತ್ಯನಾರಾಯಣ ವರ್ಮಾ ಜತೆ ನಿಕಟ ಸಂಪರ್ಕ, ಹಣದ ಬಗ್ಗೆಯೂ ಉಲ್ಲೇಖಿಸಲಾಗಿತ್ತು.
ಬಿ.ನಾಗೇಂದ್ರ ಸೂಚನೆಯಂತೆಯೇ ಸಂಪೂರ್ಣ ಹಣದ ವಹಿವಾಟು ನಡೆದಿದೆ, 187 ಕೋಟಿ ರೂ. ವಾಲ್ಮೀಕಿ ಅವ್ಯವಹಾರದ ಪೈಕಿ 97.32 ಕೋಟಿ ರೂ. ವರ್ಗಾವಣೆ ಆಗಿತ್ತು. ವಾಲ್ಮೀಕಿ ನಿಗಮಕ್ಕೆ ಸೇರಿದ್ದ 12 ಕೋಟಿ ರೂ. ಹಣ ಲೋಕಸಭಾ ಚುನಾವಣೆಗೆ ಬಳಕೆಯಾಗಿರುವುದೂ ಕೂಡ ಬಯಲಾಗಿತ್ತು. ಇನ್ನು ಬೆಂಗಳೂರು, ಬಳ್ಳಾರಿಯಲ್ಲಿ ಹಣ ಹಂಚಿಕೆ ಬಗ್ಗೆ ಚಾರ್ಜ್ಶೀಟ್ನಲ್ಲಿ ಉಲ್ಲೇಖ ಮಾಡಲಾಗಿತ್ತು. ಬಿ.ನಾಗೇಂದ್ರ ಸೇರಿ ಐವರ ವಿರುದ್ಧ ದೋಷಾರೋಪ ಪಟ್ಟಿಯನ್ನ ಸಲ್ಲಿಕೆ ಮಾಡಲಾಗಿತ್ತು.
ರಾಜ್ಯಸರ್ಕಾರ ರಚಿಸಿರುವ ಎಸ್ಐಟಿ ಅಧಿಕಾರಿಗಳು ಕೂಡ ಪ್ರತ್ಯೇಕ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಆದರೆ ಇ.ಡಿ ಮತ್ತು ಎಸ್ಐಟಿ ಎರಡು ತಂಡಗಳ ಆರೋಪಪಟ್ಟಿಯಲ್ಲಿ ಅಜಗಜಾಂತರ ವ್ಯತ್ಯಾಸವಿದೆ ಎನ್ನಲಾಗುತ್ತಿದೆ.
comments
Log in to write reviews