ಮಹಿಳೆ ಮೇಲಿನ ಅತ್ಯಾಚಾರದ ಕೇಸ್: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

ಮಹಿಳೆ ಮೇಲಿನ ಅತ್ಯಾಚಾರದ ಕೇಸ್: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

2024-11-11 01:05:18

ನವದೆಹಲಿ, ನ.11: ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಆರೋಪ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಕಾಮ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.

ಈಗಾಗಲೇ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿ ಕೆಳಹಂತದ ನ್ಯಾಯಾಲಯ ಹಾಗೂ ಹೈಕೋರ್ಟ್ ನಲ್ಲಿ ವಜಾಗೊಂಡ ಹಿನ್ನೆಲೆಯಲ್ಲಿ ಅವರು ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿ ಜಾಮೀನು ಕೋರಿದ್ದರು.
ಆದರೆ ಈ ಮೇಲ್ಮನವಿ ಅರ್ಜಿಯನ್ನೂ ಸಹ ಸುಪ್ರೀಂಕೋರ್ಟ್ ವಜಾಗೊಳಿಸಿರುವುದರಿಂದ ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ಸಿಗುವುದು  ಪ್ರಕರಣದ ತನಿಖೆ ಅಂತ್ಯವಾಗುವವರೆಗೂ ಅಸಾಧ್ಯವಾಗಿ ಪರಿಣಮಿಸಿದೆ.

author single

L Ramprasad

Managing Director

comments

No Reviews