ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಯೆಲ್ಲೋ ಅಲರ್ಟ್!

ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಯೆಲ್ಲೋ ಅಲರ್ಟ್!

2024-10-20 10:43:48

ಬೆಂಗಳೂರು, ಅ.20: ಕರ್ನಾಟಕದಲ್ಲಿ ಮುಂದಿನ ಐದು ದಿನ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ 22ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿದೆ.

ಈ ಬಗ್ಗೆ ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ಪ್ರತಿಕ್ರಿಯಿಸಿದ್ದು, ಇಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಒಳನಾಡು ಹಾಗೂ ಕರಾವಳಿಯ ಹಲವು ಕಡೆ ಮಳೆಯಾಗಿದೆ. ಪ್ರಮುಖವಾಗಿ ಶಿವಮೊಗ್ಗ 10 ಸೆ.ಮೀ, ಹೊಸಕೋಟೆ 8 ಸೆ.ಮೀ, ಬೀದರ್‌ 4 ಸೆ.ಮೀ ಮಳೆಯಾಗಿದೆ.

ಆಂಧ್ರಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳ ಕರಾವಳಿ ತೀರದಲ್ಲಿ ಗಾಳಿಯ ಪರಿಚಲನೆ 5.8 ಕಿ.ಮೀ ಎತ್ತರದಲ್ಲಿದೆ. ಪರಿಣಾಮ ಅಕ್ಟೋಬರ್ 23ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ, ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ಕೊಪ್ಪಳ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಹಲವೆಡೆ ಭಾರಿ ಮಳೆ ಸಾಧ್ಯತೆ ಇದ್ದು, ಇಂದು ಭಾನುವಾರ ಮತ್ತು ನಾಳೆ ಸೋಮವಾರ ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ!
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್​ ಘೋಷಿಸಲಾಗಿದೆ. ನಾಳೆ ಕರಾವಳಿ ಭಾಗದ ಜಿಲ್ಲೆಗಳು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ. ಹೀಗಾಗಿ ಮೀನುಗಾರಿಕೆಗೆ ತೆರಳದಂತೆ ಕರಾವಳಿ ಭಾಗದ ಮೀನುಗಾರರಿಗೆ ಸೂಚನೆ ನೀಡಲಾಗಿದೆ.

author single

L Ramprasad

Managing Director

comments

No Reviews